ಗಣರಾಜ್ಯೋತ್ಸವಾಚರಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಬಿ.ಸುರೇಶ್ಬಾಬು, ತಹಸೀಲ್ದಾರ್ ಎಂ.ಮಮತಾ, ಇಒ ದೊಡ್ಡಸಿದ್ದಯ್ಯ, ಬಿಇಒ ಕಾಂತರಾಜು meeting ಮತ್ತಿತರರು ಇದ್ದರು.
ಚಿಕ್ಕನಾಯಕನಹಳ್ಳಿ: ಈ ಬಾರಿ ನಡೆಯಲಿರುವ meeting ಗಣರಾಜ್ಯೋತ್ಸವದಂದು ಕ್ರೀಡಾ ವಿಭಾಗದಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದವರನ್ನು ಅಭಿನಂದಿಸಲಾಗುತ್ತಿದ್ದು, ಅರ್ಹರು ತಮ್ಮ ಹೆಸರಿನೊಂದಿಗೆ ವಿವರವನ್ನು ತಾಲೂಕು ಆಡಳಿತಕ್ಕೆ ನೀಡುವಂತೆ ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಗಣರಾಜ್ಯೋತ್ಸವದಂದು ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಅವರ ಸಿಬ್ಬಂದಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ತಿಳಿಸಿದರು.
ತಹಸೀಲ್ದಾರ್ ಎಂ.ಮಮತಾ ಮಾತನಾಡಿ, ಗಣರಾಜ್ಯೋತ್ಸವದಂದು ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಬೇಕು. ಬೆಳಗ್ಗೆ ಯಾವ ರೀತಿ ಆಚರಿಸುತ್ತಿರೊ ಅದೇ ರೀತಿಯಲ್ಲಿ ಸಂಜೆ ಅವರೋಹಣವನ್ನು ಮಾಡಬೇಕು. ವೇದಿಕೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಅಲಂಕಾರ ಮಾಡಬೇಕು. ಈ ನಿಟ್ಟಿನಲ್ಲಿ ಪುರಸಭೆಯ ಮುಖ್ಯಾಧಿಕಾರಿ ಕರ್ತವ್ಯ ನಿರ್ವಹಿಸಬೇಕು. ಅಗತ್ಯವಾದ ಹೂವಿನ ಗಿಡಗಳನ್ನು ತೋಟಗಾರಿಕೆ ಇಲಾಖೆಯವರು ಹಾಗೂ ವಿವಿಧ ಸಾಂಸತಿಕ ಕಾರ್ಯಕ್ರಮಗಳನ್ನು ಪಟ್ಟಣದ ಶಾಲಾ ವಿದ್ಯಾರ್ಥಿಗಳಿಂದ ನಡೆಸಿಕೊಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದರು.
ದ್ವಜವಂದನೆಯ ವೇಳೆ ಪೊಲೀಸ್, ಹೋಮ್ ಗಾರ್ಡ್ಸ್, ಸ್ಕೌಟ್ಸ್, ಗೈಡ್ಸ್ ಮತ್ತು ಎನ್ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನವನ್ನು ಉತ್ತಮವಾಗಿ ನಡೆಸಬೇಕು. ಗಣರಾಜ್ಯೋತ್ಸವದಲ್ಲಿ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಟ್ಟು ಆಚರಿಸಬೇಕು ಎಂದು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇಒ ದೊಡ್ಡಸಿದ್ದಯ್ಯ, ಬಿಇಒ ಕಾಂತರಾಜು, ಕಸಾಪ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಮಂಜಮ್ಮ, ಬೆಸ್ಕಾಂ ಎಇಇ ಗವಿರಂಗಯ್ಯ, ಸಿಡಿಪಿಒ ಹೊನ್ನಪ್ಪ, ಪಶುಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜು, ಕನ್ನಡಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿ, ದಲಿತ ಮುಖಂಡರಾದ ಲಿಂಗದೇವರು, ಗೋ.ನಿ.ವಸಂತ್ಕುಮಾರ್ ಇದ್ದರು.