Two bikers die in accident
ಚಿಂತಾಮಣಿ: ರಾಜ್ಯ ಹೆದ್ದಾರಿ ಚಿಂತಾಮಣಿ- ಮದನಪಲ್ಲಿ ರಸ್ತೆಯಲ್ಲಿ ಭಾನುವಾರ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ತಾಲೂಕಿನ ಕಲ್ಲಹಳ್ಳಿ ನಾಗರಾಜ್ (65), ಮುಂತಕದಿರೇನಹಳ್ಳಿಯ ವೆಂಕಟರೆಡ್ಡಿ (53) ಮೃತರು.
ಬೆಂಗಳೂರಿನಿಂದ ಆಂಧ್ರದ ಮದನಪಲ್ಲಿಗೆ ಹೋಗುತ್ತಿದ್ದ ಕಾರು ಎದುರುಗಡೆ ಬರುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಗಾಯಾಳುಗಳಿಗೆ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಕಾರನ್ನು ಅಪಘಾತದ ಸ್ಥಳದಲ್ಲಿಯೇ ಬಿಟ್ಟು ಚಾಲಕ ಹಾಗೂ ಪ್ರಯಾಣಿಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಉಪವಿಭಾಗ ಡಿವೈಎಸ್ಪಿ ಮುರಳೀಧರ್ ಮತ್ತು ಪಿಎಸ್ಐ ನಾಗಮ್ಮ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.