ಕಿರಣ್ ಹಾಗೂ ಕಿಶನ್ 
ರಾಜ್ಯ

ಲಾರಿ ಚಕ್ರದಡಿ ಸಿಲುಕಿ ಇಬ್ಬರು ಸಾವು

ಮಂಜುನಾಥ ಅಂಗಡಿ
ಧಾರವಾಡ: ರಾಷ್ಟ್ರೀಯ ಹೆದ್ದಾರಿಯ ಯರಿಕೊಪ್ಪ ಬಳಿ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ನಗರದ ಗೌಳಿ ಗಲ್ಲಿಯ ಕಿರಣ್ ಹಾಗೂ ಕಿಶನ್ ಮೃತರು.
ಹೆದ್ದಾರಿಯಲ್ಲಿ ಇಬ್ಬರೂ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಒನ್ ವೇದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರೂ ಕೆಳಗೆ ಬಿದ್ದು ಹಿಂದೆ ಇದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲು ಲಾರಿಯೇ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿತ್ತು. ಆದರೆ, ಸಿಸಿಟಿವಿ ಕ್ಯಾಮರಾದಿಂದ ಅಪಘಾತದ ಅಸಲಿಯತ್ತು ಗೊತ್ತಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.