ಕಾರು ಡಿಕ್ಕಿಯಾಗಿ ಇಬ್ಬರು ಸಾವು car 
ರಾಜ್ಯ

ಕಾರು ಡಿಕ್ಕಿಯಾಗಿ ಇಬ್ಬರು ಸಾವು car

ಶ್ರೀನಿವಾಸಪುರ: ಪಟ್ಟಣ ಹೊರವಲಯದ ಎನುಮರೇನಪಲ್ಲಿ ಗ್ರಾಮದ ಬಳಿ ಭಾನುವಾರ ದ್ವಿಚಕ್ರ ವಾಹನ-ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. car
ಎನುಮರೇನಪಲ್ಲಿ ಮುನಿರಾಜು (43), ಪನಸಮಾಕಲಹಳ್ಳಿಯ ಸತೀಶ್(38) ಮೃತರು.
ಇಬ್ಬರೂ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎನುಮರೇನಪಲ್ಲಿ ಬಳಿ ವೇಗವಾಗಿ ಬಂದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಇದರಿಂದ ಇಬ್ಬರ ತಲೆಗೂ ತೀವ್ರ ಪೆಟ್ಟು ಬಿದ್ದು ಅಸುನೀಗಿದ್ದಾರೆ. ಕಾರಿನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.