ರಾಹುಲ್ ಪಾಂಡ್ವೆ  
ರಾಜ್ಯ

ರು. ೨೮೭.೭೦ ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ

ಪ್ರಮುಖ ಮುಖ್ಯಾಂಶಗಳು

  • ಡಿಸಿ ರಾಹುಲ್ ಪಾಂಡ್ವೆ ಮಾಹಿತಿ
  • ಭೀಮಾ ನದಿಗೆ ಕೊಳಚೆ ನೀರು ಸೇರ್ಪಡೆ ತಡೆಗೆ ಕ್ರಮ
ಯಾದಗಿರಿ:

ನಗರದ ಸಮಗ್ರ ಅಭಿವೃದ್ಧಿ, ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ೨೮೭.೭೦ ಕೋಟಿ ರೂ.ವೆಚ್ಚದಲ್ಲಿ ಸಮಗ್ರ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪ್ರಸ್ತಾಪಿಸಲಾಗಿದೆ ಎಂದು ಜಿಲ್ಕಾಲಾಧಿರಿ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ.

ಈ ಯೋಜನೆಯ ವಿಸೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಈಗಾಗಲೇ ತಾಂತ್ರಿಕ ಅನುಮೋದನೆ ಪಡೆಯಲಾಗಿದ್ದು, ಆಡಳಿತಾತ್ಮಕ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಯೋಜನೆಯಡಿ ೯ ಎಂಎಲ್ ಡಿ ಸಾಮರ್ಥ್ಯದ ಮಲಿನ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪಿಸಲು ಉದ್ದೇಶಿಸಲಾಗಿದೆ. ಭೀಮಾ ನದಿ ಸಮೀಪದಲ್ಲಿ ವೆಟ್‌ವೆಲ್ ನಿರ್ಮಿಸಿ, ನಗರದ ವಿವಿಧ ಭಾಗಗಳಿಂದ ಹರಿಯುವ ಕೊಳಚೆ ನೀರು ಸಂಗ್ರಹಿಸಿ, ಪಂಪ್ ಮೂಲಕ ಎಸ್‌ಟಿಪಿಗೆ ರವಾನಿಸಿ ವೈಜ್ನಿನಿಕವಾಗಿ ಸಂಸ್ಕರಿಸಲು ಯೋಜಿಸಲಾಗಿದೆ. ಈ ವ್ಯವಸ್ಥೆ ಜಾರಿಯಾದಲ್ಲಿ ಪ್ರಸ್ತುತ ತೆರೆದ ಚರಂಡಿಗಳಿಂದ ನೇರವಾಗಿ ಭೀಮಾ ನದಿಗೆ ಸೇರುತ್ತಿರುವ ಕೊಳಚೆ ನೀರು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿದೆ ಎಂದರು.
ಮಲಿನ ನೀರು ಎಸ್‌ಟಿಪಿಯಲ್ಲಿ ಸಂಸ್ಕರಿಸಿದ ನಂತರವೇ ನಿಯಮಾನುಸಾರ ವಿಲೇವಾರಿ ಮಾಡುವ ಮೂಲಕ ಭೀಮಾ ನದಿಯ ಜಲ ಮಾಲಿನ್ಯ ಕಡಿಮೆ ಮಾಡಲು ಸಹಕಾರಿಯಾಗಲಿದೆ. ಅಲ್ಲದೆ ಸಮಗ್ರ ಒಳಚರಂಡಿ ವ್ಯವಸ್ಥೆಯ ಅನುಷ್ಠಾನದಿಂದ ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ಕಂಡುಬರುವುದರ ಜತೆಗೆ ಸಾರ್ವಜನಿಕರ ಆರೋಗ್ಯದ ಮೇಲೂ ಉತ್ತಮ ಪರಿಣಾಮವಾಗಲಿದೆ ಎಂದರು.
ನಗರದಲ್ಲಿ ಮಲಿನ ನೀರಿನ ವೈಜ್ನನಿಕ ನಿರ್ವಹಣೆ ಸಾಧ್ಯವಾಗುವುದರಿಂದ ಪರಿಸರ ಸಂರಕ್ಷಣೆಗೆ ಸಹ ಹೆಚ್ಚಿನ ಆದ್ಯತೆ ನೀಡಿದಂತಾಗುತ್ತದೆ. ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತ ತಕ್ಷಣ ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮ್ನ ಕೈಗೊಳ್ಳಲಾಗುವುದು. ನಗರವನ್ನು ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿಯನ್ನಾಗಿ ಮಾಡಲು ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದರು.