Understand the importance of education.
ಕೊರಟಗೆರೆ: ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಶ್ರಮ ಮತ್ತು ಸಮಯ ನಿರ್ವಹಣೆ ಅತ್ಯಂತ ಮುಖ್ಯವೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಈರಪ್ಪನಾಯ್ಕ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದಿಂದ ಶನಿವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಅರಿತು, ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ತಮ್ಮ ಜವಾಬ್ದಾರಿ ಅರಿಯಬೇಕು ಎಂದು ಹೇಳಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.ಡಿ.ಎಸ್.ದೀಪಾ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನಾರ್ಜನೆಯೊಂದಿಗೆ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪಾವಗಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಎನ್.ಶ್ರೀಧರ್ ಮಾತನಾಡಿ, ವೈಜ್ಞಾನಿಕ ದೃಷ್ಟಿಕೋನದಿಂದ ಸತ್ಯ ಅನ್ವೇಷಣೆ ಮಾಡುವುದೇ ಸಂಶೋಧನೆಯ ಉದ್ದೇಶವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಇದು ಸಹಕಾರಿ ಎಂದು ಹೇಳಿದರು.