ಕಾರಿಮನಿ ಗ್ರಾಮದ ಪಂಚವಟಿಯಲ್ಲಿ ಕೆಎಲ್‌ಇ ಕೃಷಿ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ವಿಜಯ ಮೆಟಗುಡ್ಡ ಉದ್ಘಾಟಿಸಿದರು. ನೀಲಕಂಠ ಸ್ವಾಮೀಜಿ, ಡಾ.ಮಂಜುಳಾ ಪಾಟೀಲ, ಡಾ.ಮಂಜುನಾಥ ಚೌರಡ್ಡಿ, ಶಂಕರಗೌಡ ಪಾಟೀಲ ಇತರರಿದ್ದರು. 
ರಾಜ್ಯ

ಕಲಿತ ಜ್ಞಾನ ಸುಧಾರಣೆಗೆ ಬಳಸಿ

ಬೆಳಗಾವಿ:

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಮಾನವೀಯ ಮೌಲ್ಯ ವೃದ್ಧಿಸುವ ವೇದಿಕೆಯಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ವಿಜಯ ಮೆಟಗುಡ್ಡ ಹೇಳಿದರು.

ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದ ಪಂಚವಟಿಯಲ್ಲಿ ಕೆಎಲ್‌ಇ ಕೃಷಿ ಮಹಾವಿದ್ಯಾಲಯದಿಂದ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಬಿರಾರ್ಥಿಗಳು ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಹಾಗೂ ಪ್ರಾಯೋಗಿಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ತರಗತಿಯಲ್ಲಿ ಕಲಿತ ಜ್ಞಾನವನ್ನು ಗ್ರಾಮೀಣ ಜನರ ಜೀವನ ಸುಧಾರಣೆಗೆ ಬಳಸಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಮಹಾಂತ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವ ಬಗ್ಗೆ ಚಿಂತಿಸಬೇಕು. ಕೃಷಿಯು ದೇಶದ ಆರ್ಥಿಕತೆ ಮತ್ತು ಜನಜೀವನದ ಪ್ರಮುಖ ಆಧಾರವಾಗಿದ್ದು, ಪ್ರಾಮುಖ್ಯ ನೀಡಬೇಕಿದೆ ಎಂದರು.
ಕೆಎಲ್‌ಇ ಕಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಬಿ.ಡಿ.ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ, ವ್ಯವಸ್ಥಾಪಕ ಶಂಕರಗೌಡ ಪಾಟೀಲ, ಇನಾಮದಾರ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ಬಾಳೇಶ ಶೇಗುಣಶಿ, ಧಾರವಾಡ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕಿ ಡಾ.ಮಂಜುಳಾ ಪಾಟೀಲ ಇತರರಿದ್ದರು.
ಕಾರಿಮನಿ ಗ್ರಾಮದ ಪಂಚವಟಿಯಲ್ಲಿ ಕೆಎಲ್‌ಇ ಕೃಷಿ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ವಿಜಯ ಮೆಟಗುಡ್ಡ ಉದ್ಘಾಟಿಸಿದರು. ನೀಲಕಂಠ ಸ್ವಾಮೀಜಿ, ಡಾ.ಮಂಜುಳಾ ಪಾಟೀಲ, ಡಾ.ಮಂಜುನಾಥ ಚೌರಡ್ಡಿ, ಶಂಕರಗೌಡ ಪಾಟೀಲ ಇತರರಿದ್ದರು.