ಬೇಸಿಗೆಯಲ್ಲಿ ಮಿತವಾಗಿ ನೀರು ಬಳಸಿ summer 
ರಾಜ್ಯ

ಬೇಸಿಗೆಯಲ್ಲಿ ಮಿತವಾಗಿ ನೀರು ಬಳಸಿ summer

ಕೋಲಾರ ಡೆಸ್ಕ್
ಬೂದಿಕೋಟೆ: ಬೇಸಿಗೆ ಬಿಸಿಲಿನ ತಾಪ ಈ ವರ್ಷ ತೀವ್ರಗೊಂಡಿದೆ. ದಿನಗಳೆದಂತೆ ತಾಪಮಾನ ಹೆಚ್ಚಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದು ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಎಂ.ಕೆ.ಶಶಿಕಲಾ ಹೇಳಿದರು.summer
ಹೋಬಳಿಯ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಅದಾಲತ್​ನಲ್ಲಿ ಮಾತನಾಡಿ, ಈಗಾಗಲೇ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್​ ೊರ್ಸ್​ ಸಭೆಯಲ್ಲಿ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಬೇಕು, ಸ್ವಚ್ಛತೆಗೆ ಆದ್ಯತೆ ನೀಡಲು ತೀಮಾರ್ನಿಸಲಾಗಿದೆ, ಜಿಲ್ಲಾಧಿಕಾರಿ ಮತ್ತು ಸಿಇಒ ಆದೇಶದಂತೆ ಗ್ರಾಮಗಳಲ್ಲಿ ನೀರಿನ ಅದಾಲತ್​ ಸಭೆ ನಡೆಸಲಾಗುತ್ತಿದೆ ಎಂದರು.
ನೀರಿನ ಸಮಸ್ಯೆ ಹೆಚ್ಚುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಗ್ರಾಮ ಪಂಚಾಯಿತಿಗಳು ಎಚ್ಚೆತ್ತುಕೊಂಡು ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮಗಳಲ್ಲಿ ಕೊಳವೆ ಬಾವಿ ಹೆಚ್ಚಿವೆ. ಹಾಗಾಗಿ ಎಲ್ಲ ಕೊಳವೆಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.
ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಗ್ರಾಪಂಗಳ ಪಿಡಿಒಗಳಿಗೆ ಮಾಹಿತಿ ನೀಡಬೇಕು. ಇಲ್ಲವೇ ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು ಎಂದರು.
ನೀರನ್ನು ಮಿತವಾಗಿ ಬಳಸಬೇಕು, ಗ್ರಾಮದ ನೈರ್ಮಲ್ಯ ಮತ್ತು ಆರೋಗ್ಯ ರಕ್ಷಣೆಯಲ್ಲಿ ಗ್ರಾಮ ಆಡಳಿತದ ಜತೆಗೆ ಎಲ್ಲ ಗ್ರಾಮಸ್ಥರು ಕೈಜೋಡಿಸಿ ತಮ್ಮ ತಮ್ಮ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ರೂಪಿಸಿಕೊಳ್ಳಬೇಕು ಎಂದರು.
ಗ್ರಾಮಸ್ಥರು ತಮ್ಮ ತಮ್ಮ ಮನೆಗಳ ಮುಂದೆ ಮರಗಳನ್ನು ನೆಟ್ಟು ಪೋಷಿಸಿ ಪರಿಸರನಿರ್ಮಿಸಿ ತಮ್ಮ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕು. ಗ್ರಾಮ ಪಂಚಾಯಿತಿ ಮೂಲಕ ಪ್ರತಿ ಮನೆಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ, ಸರ್ಕಾರಿ ಕೊಳವೆಬಾವಿ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದರು.