ತುರ್ವಿಹಾಳದ ರೈತ ಸಂಪರ್ಕ ಕೇಂದ್ರದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ರೈತರಿಗೆ ಬಿತ್ತನೆ ಬೀಜ ವಿತರಿಸಿದರು. ಪಪಂ ಅಧ್ಯಕ್ಷ ಬಾಪುಗೌಡ ದೇವರಮನಿ, ಎಂ.ಡಿ.ಫಾರೂಕ್‌ಸಾಬ್ ಖಾಜಿ, ಸೋಮನಾಥ ಮಾಟೂರ, ನೀರಾವರಿ ಇಲಾಖೆ ಜೆಇ ದಾವೂದ್, ಸಿಡಿಪಿಒ ಲಿಂಗನಗೌಡ, ಕೃಷಿ ಅಧಿಕಾರಿ ಶಿವದತ್ತ ಇದ್ದರು. 
ರಾಜ್ಯ

ಕೃಷಿ ಇಲಾಖೆ ಯೋಜನೆ ಬಳಸಿಕೊಳ್ಳಿ

JAGADEESH KUMBAR

ಪ್ರಮುಖ ಮುಖ್ಯಾಂಶಗಳು

  • ಶಾಸಕ ಬಸನಗೌಡ ತುರ್ವಿಹಾಳ ಹೇಳಿಕೆ
ಸಿಂಧನೂರು: ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗುಣಮಟ್ಟದ ಬೀಜಗಳನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು. 
ತುರ್ವಿಹಾಳದ ರೈತ ಸಂಪರ್ಕ ಕೇಂದ್ರದಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 
ಸರ್ಕಾರದ ವಿವಿಧ ಕೃಷಿ ಯೋಜನೆಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕೃಷಿ ಇಲಾಖೆಯು ರೈತರಿಗೆ ತಾಂತ್ರಿಕ ಮಾರ್ಗದರ್ಶನ, ಅಗತ್ಯ ಮಾಹಿತಿ ಹಾಗೂ ಸಬ್ಸಿಡಿ ಸೌಲಭ್ಯಗಳನ್ನು ತಲುಪಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
 ತಾಲೂಕು ಸಹಾಯಕ ಕೃಷಿ ನಿರ್ದೇಶಕ ರುದ್ರಗೌಡ ಮಾತನಾಡಿ, ಕಳಪೆ ಬೀಜ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.