ಹೂವಿನಹಡಗಲಿ ರೈತಸಂಪರ್ಕ ಕೇಂದ್ರದಲ್ಲಿ ಶಾಸಕ ಕೃಷ್ಣನಾಯ್ಕ ರೈತರಿಗೆ ಮುಂಗಾರು ಹಂಗಾಮಿನ ಬಿತ್ತನೆಬೀಜ ವಿತರಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಟಿ., ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ದೀಪದ ಕೃಷ್ಣಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಟಿ ಲಿಂಗರಾಜ, ಕೃಷಿ ಅಧಿಕಾರಿ ಕಿರಣ್ ಇತರರಿದ್ದರು. 
ರಾಜ್ಯ

ರಸಗೊಬ್ಬರ ಮಾರಾಟ ಸೌಲಭ್ಯ ಬಳಸಿಕೊಳ್ಳಿ

JAGADEESH KUMBAR
ಹೂವಿನಹಡಗಲಿ: ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ. ರೈತರ ಬೇಡಿಕೆಗೆ ಅನುಗುಣವಾಗಿ  ಹಂತ ಹಂತವಾಗಿ ಬಿತ್ತನೆಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ರೈತರು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು. 
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಬಿತ್ತನೆ ಬೀಜ, ಕೃಷಿಭಾಗ್ಯ ಯೋಜನೆ, ಸಾವಯವ ಕೃಷಿ ಹಾಗೂ ಸರ್ಕಾರದ ಇತರ ಯೋಜನೆಗಳನ್ನು ಇಲಾಖೆಯ ಅಧಿಕಾರಿಗಳು ರೈತರಿಗೆ ಸಕಾಲದಲ್ಲಿ ತಲುಪಿಸಬೇಕು. ಕಳಪೆ ಬಿತ್ತನೆಬೀಜ ಮಾರಾಟ ಮಾಡುವವರೊಂದಿಗೆ ವ್ಯವಹಾರ ಮಾಡಬಾರದು.
 ತಾಲೂಕಿನಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಲು ಕೃಷಿ ಇಲಾಖೆಯಿಂದ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಟಿ., ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ದೀಪದ ಕೃಷ್ಣಪ್ಪ, ಕೃಷಿ ಅಧಿಕಾರಿ ಕಿರಣ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಟಿ ಲಿಂಗರಾಜ, ವಕೀಲ ಗಂಗಾಧರ್, ಪ್ರಮುಖರಾದ ತಿಮ್ಮಣ್ಣ, ತಿಮ್ಮಪ್ಪ ನಾಯಕ ಇತರರಿದ್ದರು.