ವಚನ ಸಾಹಿತ್ಯ ಸಮ್ಮೇಳನ ನಿಮಿತ್ತ ಕಲಬುರಗಿಯಲ್ಲಿ ಮಂಗಳವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿದರು. ಡಾ.ಮಲ್ಲಿಕಾರ್ಜುನ ವಡ್ಡನಕೇರಿ, ಶಿವರಾಜ ಅಂಡಗಿ, ಬಿ.ಎಂ.ಪಾಟೀಲ ಕಲ್ಲೂರ, ಜಗದೀಶ ಮರಪಳ್ಳಿ ಇದ್ದರು.
ಕಲಬುರಗಿ: ಸಮಾಜದಲ್ಲಿ ಮಾನವೀಯ ಸಂಬಂಧ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಸಹಯೋಗದಡಿ ಆ.30ರಂದು ನಗರದ ಕನ್ನಡ ಭವನ ಅಂಗಳದಲ್ಲಿ ವಿಭಾಗ ಮಟ್ಟದ ಪ್ರಥಮ ವಚನ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಅಕಾಡೆಮಿ ಅಧ್ಯಕ್ಷ ಬಿ.ಎಂ. ಪಾಟೀಲ ಕಲ್ಲೂರ ಹಾಗೂ ಶಸಾಪ ಜಿಲ್ಲಾಧ್ಯಕ್ಷ ಡಾ.ಮಲ್ಲಿಕಾರ್ಜುನ ವಡ್ಡನಕೇರಿ ಹೇಳಿದರು.
ಕನ್ನಡ ಭವನದಲ್ಲಿ ಮಂಗಳವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಲುಷಿತಗೊಂಡಿರುವ ಸಮಾಜಕ್ಕೆ ಶ್ರಮ ಸಂಸ್ಕೃತಿ,, ಸಮ ಸಂಸ್ಕೃತಿ ಕಟ್ಟಿಕೊಟ್ಟ ಬಸವಾದಿ ಶರಣರ ವಿಚಾರಗಳ ಪ್ರಚುರಪಡಿಸುವುದು ತುರ್ತು ಅಗತ್ಯವಿದೆ. ಹೀಗಾಗಿ ಸಮ್ಮೇಳನ ರೂಪಿಸುವ ಮೂಲಕ ವೈಚಾರಿಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ಸಮ್ಮೇಳನ ವೈವಿಧ್ಯಮಯವಾಗಿ ಆಯೋಜಿಸಲು ನಿರ್ಧರಿಸಿದ್ದು, ಸಮ್ಮೇಳನಾಧ್ಯಕ್ಷರು ಮತ್ತು ಸ್ವಾಗತ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ನಡೆಯಲಿದೆ ಎಂದರು.
ಕಸಾಪ ಜಿಲ್ಲಾ ಕಾರ್ಯದರ್ಶಿ ಶಿವರಾಜ ಅಂಡಗಿ, ಹಿರಿಯ ಕವಿ ಅಮೃತಪ್ಪ ಅಣೂರ, ಪ್ರಮುಖರಾದ ಶರಣರಾಜ ಛಪ್ಪರಬಂದಿ, ಜಗದೀಶ ಮರಪಳ್ಳಿ, ವಿದ್ಯಾಸಾಗರ ದೇಶಮುಖ, ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ, ಗಣೇಶ ಚಿನ್ನಾಕಾರ, ಸೋಮಶೇಖರಯ್ಯ ಹೊಸಮಠ, ಕಲ್ಯಾಣಕುಮಾರ ಶೀಲವಂತ, ಮಹೇಶ ಚಿಂತನಪಳ್ಳಿ, ಹಣಮಂತರಾವ ಪೆಂಚನಪಳ್ಳಿ, ಶಿವಾನಂದ ಪೂಜಾರಿ, ಧರ್ಮರಾಜ ಜವಳಿ, ದಿನೇಶ ಮದಕರಿ, ಶಕುಂತಲಾ ಪಾಟೀಲ, ಜಯಶ್ರೀ ಜಮಾದಾರ, ರಮೇಶ ಬಡಿಗೇರ, ಸಿದ್ಧಲಿಂಗ ಬಾಳಿ ಇತರರಿದ್ದರು.