Vaddagere Veera Nagamma temple theft
ಕೊರಟಗೆರೆ: ತಾಲೂಕಿನ ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಸ್ಥಾನದಲ್ಲಿ ಮಂಗಳವಾರ ತಡರಾತ್ರಿ ಕಳ್ಳತನ ನಡೆದಿದ್ದು, ಬೆಳ್ಳಿ ಹಾಗೂ ಬಂಗಾರದ ಒಡವೆಗಳನ್ನು ದೋಚಿದ್ದಾರೆ.
ಬುಧವಾರ ಮುಂಜಾನೆ ಪೂಜೆಗಾಗಿ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲು ಮುರಿದಿರುವುದು ಕಂಡುಬಂದಿದೆ. ಕೂಡಲೇ ಅವರು ಪೊಲೀಸ್ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಕೆ.ವಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳರು ಮೊದಲು ದೇವಸ್ಥಾನದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಬಳಿಕ ಗ್ಯಾಸ್ ಕಟರ್ ಬಳಸಿ ದೇವಸ್ಥಾನದ ಮುಖ್ಯ ಬಾಗಿಲನ್ನು ತುಂಡರಿಸಿ ಒಳನುಗ್ಗಿದ್ದಾರೆ. ಸಾಕ್ಷ$್ಯ ನಾಶಪಡಿಸುವ ಉದ್ದೇಶದಿಂದ ದೇವಸ್ಥಾನದಲ್ಲಿದ್ದ ಸಿಸಿಟಿವಿಯ ಡಿವಿಆರ್ ಹೊತ್ತೊಯ್ದಿದ್ದಾರೆ.