ಉಡಮನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಕನಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಜಾಬ್ ಕಾರ್ಡ್ ಮೇಳಕ್ಕೆ ಸಂಸದ ಸಾಗರ ಈಶ್ವರ ಖಂಡ್ರೆ ಚಾಲನೆ ನೀಡಿ ಜಾಬ್ ಕಾರ್ಡ್ ವಿತರಿಸಿದರು. ಮಾಜಿ ಶಾಸಕ ಅಶೋಕ ಖೇಣಿ, ಜಿಪಂ ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟ್ಯಪ್ಪಗೊಳ್, ತಾಪಂ ಇಒ ಲಿಂಗರಾಜ ಪಾಟೀಲ ಇತರರು ಇದ್ದರು.
- ಸಂಸದ ಸಾಗರ ಖಂಡ್ರೆ ಅಭಿಮತ
- ಕರಕನಳ್ಳಿಯಲ್ಲಿ ಜಾಬ್ ಕಾರ್ಡ್ ವಿತರಣೆ
ಚಿಟಗುಪ್ಪ: ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ ಕೆಲಸ ದೊರೆಯುವಂತೆ ಸರ್ಕಾರದ ವಿಬಿ&ಜಿ ರಾಮ್ಜಿ ಯೋಜನೆಯ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೀದರ್ ಸಂಸದ ಸಾಗರ ಖಂಡ್ರೆ ಹೇಳಿದರು.
ತಾಲೂಕಿನ ಉಡಮನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಕನಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಯಲ್ಲಿ ವಿಬಿ&ಜಿ ರಾಮ್ಜಿ ಯೋಜನೆಯಡಿ ದೊರೆಯುವ ಉದ್ಯೋಗ ಸೌಲಭ್ಯ ಬಳಸಿಕೊಳ್ಳಬೇಕು. ಗ್ರಾಮಗಳಲ್ಲಿರುವ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
10 ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಅಶೋಕ ಖೇಣಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ ಕೆ., ತಾಪಂ ಇಒ ಅಧಿಕಾರಿ ಲಿಂಗರಾಜ ಪಾಟೀಲ, ತಾಂತ್ರಿಕ ಸಂಯೋಜಕ ಸುಧಾಕರ ಪಾಟೀಲ, ಐಇಸಿ ಸಂಯೋಜಕ ವಿಶ್ವನಾಥ, ತಾಂತ್ರಿಕ ಆದರ್ಶ ರಾಠೋಡ್, ಬಿಎಫ್ಟಿ ರಜನೀಕಾಂತ, ಕಾರ್ಯದರ್ಶಿ ರಾಮಚಂದ್ರ ಇತರರಿದ್ದರು.