ಲಬುರಗಿ ಜೆಸ್ಕಾಂ ಕಚೇರಿಯಲ್ಲಿ ನೀರಾವರಿ ವಾಣಿಜ್ಯ ಗ್ರಾಹಕರಿಗೆ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಕೆಇಆರ್ಸಿ ಗುರುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ತಾಂತ್ರಿಕ ನಿರ್ದೇಶಕ ಚಂದ್ರಕಾಂತ ಪಾಟೀಲ್, ಮುಖ್ಯ ಹಣಕಾಸು ಅಧಿಕಾರಿ ಬಿ.ಎಚ್.ಶಿವಶಂಕರ್ ಇತರರಿದ್ದರು.
- ನೀರಾವರಿ ವಾಣಿಜ್ಯ ಗ್ರಾಹಕರಿಗೆ ವಿದ್ಯುತ್ ದರ ಪರಿಷ್ಕರಣೆ
ಕಲಬುರಗಿ: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ)ದ ವತಿಯಿಂದ ನೀರಾವರಿ ಪಂಪ್ಸೆಟ್, ವಾಣಿಜ್ಯ ಹಾಗೂ ಕೈಗಾರಿಕಾ ಗ್ರಾಹಕರಿಗೆ ಸಂಬಂಧಿಸಿದ 2025-26ನೇ ಆರ್ಥಿಕ ವರ್ಷದ ವಿದ್ಯುತ್ ದರ ಪರಿಷ್ಕರಣೆ ಕುರಿತ ಸಾರ್ವಜನಿಕ ವಿಚಾರಣಾ ಸಭೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.
ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಲ್ಲಿಸಿರುವ ಅರ್ಜಿ ಹಿನ್ನೆಲೆಯಲ್ಲಿ, ದರ ಪರಿಷ್ಕರಣೆ ಪ್ರಸ್ತಾವನೆ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಮತ್ತು ಆೇಪಣೆ ಆಲಿಸಲು ಆಯೋಗ ಈ ವಿಚಾರಣಾ ಸಭೆ ಆಯೋಜಿಸಿತ್ತು. ನೀರಾವರಿ ಪಂಪ್ಸೆಟ್ಗಳು, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ಅನ್ವಯಿಸುವ ದರ ಪರಿಷ್ಕರಣೆ ಕುರಿತು ಸಭೆಯಲ್ಲಿ ವಿಸತ ಚರ್ಚೆ ನಡೆಯಿತು.
ಆನ್ಲೈನ್ ಮೂಲಕ ಹಾಗೂ ಜೆಸ್ಕಾಂನ ನಿಗಮ ಕಚೇರಿಯ ಸಭಾಂಗಣದಲ್ಲಿ ಆಫ್ಲೈನ್ ಮೂಲಕ ಭಾಗವಹಿಸಿದ ಗ್ರಾಹಕರು, ವಿದ್ಯುತ್ ದರ ಏರಿಕೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕೆಲವರು ದರ ಏರಿಕೆಯಿಂದ ಸಾಮಾನ್ಯ ಜನತೆ ಮತ್ತು ಸಣ್ಣ ಕೈಗಾರಿಕೆಗಳ ಮೇಲೆ ಆಗುವ ಆರ್ಥಿಕ ಭಾರ ಉಲ್ಲೆಖಿಸಿ, ಪರಿಷ್ಕರಣೆಯಲ್ಲಿ ಸಮತೋಲನ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು. ಇನ್ನೂ ಕೆಲವರು ವಿದ್ಯುತ್ ಸರಬರಾಜಿನ ಗುಣಮಟ್ಟ, ವ್ಯತ್ಯಯ ಹಾಗೂ ಮೂಲಸೌಕರ್ಯ ಸಂಬಂಧಿತ ಸಮಸ್ಯೆಗಳ ಕುರಿತ ಪ್ರಶ್ನೆ ಮಾಡಿದರು.
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಮತ್ತು ಆೇಪಣೆ ಪರಿಗಣಿಸಿ ಅಂತಿಮ ಆದೇಶ ಹೊರಡಿಸಲಾಗುವುದು ಎಂದು ಕೆಇಆರ್ಸಿ ಅಧ್ಯ ಪಿ.ರವಿಕುಮಾರ್ ಹೇಳಿದರು.
ಕೆಇಆರ್ಸಿ ಸದಸ್ಯರಾದ (ಕಾನೂನು) ಹೆಚ್.ಕೆ.ಜಗದೀಶ, ಸದಸ್ಯರಾದ ಜಾವೇದ ಅಖ್ತರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಉಪಸ್ಥಿತರಿದ್ದರು. ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ತಾಂತ್ರಿಕ ನಿರ್ದೇಶಕ ಚಂದ್ರಕಾಂತ ಪಾಟೀಲ್ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಬಿ.ಎಚ್.ಶಿವಶಂಕರ ಸೇರಿದಂತೆ ಅಧಿಕಾರಿಗಳು ಮತ್ತು ಸಾರ್ವಜನಿಕರು ನಿಗಮ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.