ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ವಿಜಯಲಕ್ಷ್ಮೀ ಪೂಜಾರಿಗೆ ಪ್ರಾಚಾರ್ಯ ವಿಶ್ವನಾಥ ಕಾಮಗೋಳ ಪ್ರಶಸ್ತಿ ಪ್ರಮಾಣಪತ್ರ ವಿತರಿಸಿದರು. 
ರಾಜ್ಯ

ರಾಜ್ಯಮಟ್ಟದ ಈಜು ಸ್ಪರ್ಧೆಗೆ ವಿಜಯಲಕ್ಷ್ಮೀ

ಬೆಳಗಾವಿ: ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮೀ ಪೂಜಾರಿ ಈಚೆಗೆ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಪಿಪಲ್ ಟ್ರಿ ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ 100 ಮೀಟರ್ ಹಾಗೂ 50 ಮೀಟರ್ ಈಜು ಸ್ಪರ್ಧೆಯಲ್ಲಿ 1 ಚಿನ್ನ ಹಾಗೂ 2 ರಜತ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕೆಎಲ್ಇ ಕಾರ್ಯಾಧ್ಯಕ್ಷ ಅಮಿತ ಕೋರೆ, ಪಿಯುಸಿ ಕಾರ್ಯಕಾರಿಣಿ ಸಮಿತಿ ಕಾರ್ಯಾಧ್ಯಕ್ಷ ಮಹಾಂತೇಶ ಕವಟಗಿಮಠ, ಸರ್ವ ಸದಸ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಉಪ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.