- ಕೆಲಸದ ಒತ್ತಡ, ಮೇಲಧಿಕಾರಿಗಳ ಕಿರುಕುಳ ಆರೋಪ
- ತನಿಖೆ ಭರವಸೆ ನೀಡಿದ ಎಸಿ
ಬಸವಕಲ್ಯಾಣ: ಗ್ರಾಮ ಆಡಳಿತಾಧಿಕಾರಿಯೊಬ್ಬರು ಬುಧವಾರ ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೆ ಕೆಲಸದ ಒತ್ತಡ, ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ನಿಖರ ಕಾರಣ ತನಿಖೆ ನಂತರವೇ ಸ್ಪಷ್ಟವಾಗಲಿದೆ.
ಕಾಂಬಳೆವಾಡಿ ನಿವಾಸಿ, ಹಳ್ಳಿ ಮತ್ತು ಉಮ್ಮಾಪುರದ ಗ್ರಾಮ ಆಡಳಿತಾಧಿಕಾರಿ ಮಹಾದೇವ ಪಿಲ್ಲಂಗೊಲ್ಲೆ (27) ಆತ್ಮಹತ್ಯೆ ಮಾಡಿಕೊಂಡವರು. ನಮಗೆ ನ್ಯಾಯ ಬೇಕು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವವರೆಗೆ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದರಿಂದ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ತಪ್ಪಿತಸ್ಥರಿಗೆ ಶಿೆ ಕೊಡಿಸುವುದಾಗಿ ಶಾಸಕ ಶರಣು ಸಲಗರ ಭರವಸೆ ನೀಡಿದ ನಂತರ ವಾತಾವರಣ ತಿಳಿಯಾಯಿತು.
ಗುರುವಾರ ಬೆಳಗ್ಗೆ ಮರಣೋತ್ತರ ಪರೀೆ ನಂತರ ಮೃತದೇಹ ಮನೆಗೆ ತರುತ್ತಲೇ ತಾಯಿ ಸೇರಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ಇಡೀ ವಾಡಿಯಲ್ಲಿ ಶೋಕದ ಛಾಯೆ ಆವರಿಸಿತ್ತು. ಮನೆ ಮುಂದೆ ಸ್ಥಳಿಯರು, ವಿವಿಧೆಡೆಯಿಂದ ಆಗಮಿಸಿದ ಗ್ರಾಮ ಅಡಳಿತಾಧಿಕಾರಿಗಳು ಸೇರಿದ್ದರು.
ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸ್ಥಳಕ್ಕೆ ಆಗಮಿಸಿದ್ದ ಸಹಾಯಕ ಆಯುಕ್ತ ಪ್ರಕಾಶ ಕುದರಿ ಅಶ್ವಾಸನೆ ನೀಡಿದರೂ ಸಂಬಂಧಿಕರು ಮತ್ತು ಗ್ರಾಮಸ್ಥರು ಪಟ್ಟು ಸಡಿಲಿಸಲಿಲ್ಲ. ಬಳಿಕ ಜಿಲ್ಲಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಎಸಿ ಕುದರಿ, ಟನೆ ಮತ್ತು ಬೆಳವಣಿಗೆ ಕುರಿತು ಮಾಹಿತಿ ನೀಡಿದರು. ತನಿಖೆ ನಡೆಸಿ ತಪ್ಪು ಯಾರದಿದ್ದರೂ ಸೂಕ್ತ ಕ್ರಮ ಜರುಗಿಸಲಾಗುವುದು. ಸರ್ಕಾರದ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಮೇಲಧಿಕಾರಿಗಳು ಸೂಚನೆ, ನಿರ್ದೇಶನ ನೀಡುವುದು ಸಹಜ. ವೈಯಕ್ತಿಕವಾಗಿ ಯಾರ ಮೇಲೂ ಕೆಲಸದ ಒತ್ತಡ ಹೇರುವುದಿಲ್ಲ ಎಂದು ತಿಳಿಸಿದರು.
ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ, ಸಿಪಿಐ ಅಮೂಲ ಕಾಳೆ, ಪಿಎಸ್ಐ ಸುವರ್ಣ ಮಲಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಆಡಳಿತಾಧಿಕಾರಿಗಳ ಸಂದ ಜಿಲ್ಲಾಧ್ಯಕ್ಷ ಬಬ್ರುವಾಹನ ಬೆಳಮಗಿ, ತಾಲೂಕು ಅಧ್ಯಕ್ಷ ಕಾಶೀನಾಥ ಚಂಡಕಾಪುರೆ, ಕಂದಾಯ ನೌಕರರ ಸಂದ ಜಿಲ್ಲಾಧ್ಯಕ್ಷ ರಾಹುಲದೇವ ಪ್ರಸಾದ, ಅನೀಲಕುಮರ ಚಾಂದೆ ಇತರರಿದ್ದರು.
ಪ್ರಕರಣ: ಮಹಾದೇವ ಮನೆಯಲ್ಲಿ ಊಟ&ತಿಂಡಿ ಸರಿಯಗಿ ಮಾಡದೆ ಒಬ್ಬಂಟಿಗನಾಗಿ ಇರುತ್ತಿದ್ದ. ವಿಚಾರಿಸಿದರೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳುತ್ತಿದ್ದ. ಇದೇ ಕಾರಣಕ್ಕೆ ಆಹತ್ಯಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯವಿದೆ ಎಂದು ಮೃತನ ತಾಯಿ ಜಾನಕಬಾಯಿ ಪಿಲ್ಲಂಗೊಲ್ಲೆ ದೂರಿದ್ದು, ಮಂಠಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವೆ
ಮಹಾದೇವ ಪಿಲ್ಲಂಗೊಲ್ಲೆ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಶರಣು ಸಲಗರ ದೂರವಾಣಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪರ್ಕಿಸಿ ಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇಂಜಿನಿಯರಿಂಗ್ ಪದವಿ ಪಡೆದಿದ್ದ ಮಹಾದೇವ ಆತ್ಮಹತ್ಯೆ ನೋವಿನ ಸಂಗತಿ. ಯಾರಾದರೂ ಕಿರುಕುಳ ಕೊಟ್ಟಿರಬಹುದು. ಹಾಗಂತ ಸಾವು ಒಂದೇ ಪರಿಹಾರವಲ್ಲ. ಯಾರೊಬ್ಬರೂ ಇಂಥ ಕೆಲಸಕ್ಕೆ ಕೈಹಾಕಬಾರದು. ಕೆಲಸದ ಒತ್ತಡ ಮತ್ತು ಮೇಲಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಹೇಳುತ್ತಿದ್ದಾರೆ. ಸಾವಿಗೆ ಕಾರಣರಾದವರಿಗೆ ಶಿೆ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಅನುಕಂಪದ ಅಧಾರದ ಮೇಲೆ ಮೂರು ತಿಂಗಳೊಳಗೆ ಮೃತನ ಸಹೋದರಿಗೆ ಸರ್ಕಾರಿ ನೌಕರಿ ಕೊಡಿಸಲು ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು.
"
ಕೆಲಸದ ಒತ್ತಡ ಮತ್ತು ಮೇಲಧಿಕಾರಿಗಳ ಕಿರುಕುಳದಿಂದ ಮಹಾದೇವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.
— > ಬಬ್ರುವಾಹನ ಬೆಳಮಗಿ ಗ್ರಾಮ ಆಡಳಿತಾಧಿಕಾರಿಗಳ ಸಂದ ಜಿಲ್ಲಾಧ್ಯಕ್ಷ