* 10 ಮಹಾನಗರ ಪಾಲಿಕೆಯಲ್ಲಿ ಜಾರಿ
* ಕನ್ನಡ ರಾಜ್ಯೋತ್ಸವದಲ್ಲಿ ಸಿಎಂ ಡಿಕೆಶಿ ಹೇಳಿಕೆ
ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆ ಪ್ಯಾಪ್ತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ‘ಗ್ರಾಮಾನುಭವ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ, ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
2-3 ದಿನ ಗ್ರಾಮ ವಾಸ್ತವ್ಯ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶ. 8, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಹಳ್ಳಿಯಲ್ಲೇ ತಂಗಿ ಗದ್ದೆ, ತೋಟಗಳಿಗೆ ಭೇಟಿ ನೀಡಿ ಕೃಷಿ, ಹೈನುಗಾರಿಕೆ ಮತ್ತು ಗ್ರಾಮೀಣ ಸಂಸ್ಕೃತಿಯನ್ನು ಪ್ರಾಯೋಗಿಕವಾಗಿ ಕಲಿಯಲಿದ್ದಾರೆ ಎಂದರು.
ಹುದ್ದೆಗಳ ಭರ್ತಿಗೆ ಕ್ರಮ:
ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ 72 ಸಾವಿರ ಹುದ್ದೆಗಳ ಭರ್ತಿ ಜತೆಗೆ 66 ಸಾವಿರ ಉದ್ಯೋಗಗಳನ್ನು ಸೃಷಿ ವಾಡಲಾಗಿದೆ. ಕೌಶಲಾಭಿವದ್ಧಿ ಇಲಾಖೆಯಿಂದ ಯುವನಿಧಿ ಯೋಜನೆ ಜತೆಗೆ ಖಾಸಗಿ ಉದ್ಯೋಗ ವಿನಿಮಯಕ್ಕಾಗಿ ಉದ್ಯೋಗ ಸೇತು ವ್ಯವಸ್ಥೆ ರೂಪಿಸಲಾಗಿದೆ. ಇದಕ್ಕಾಗಿ 100 ಐಟಿಐ ಸಂಸ್ಥೆಗಳನ್ನು ಅತ್ಯುತಮ ಕೈಗಾರಿಕಾ ಸಂಸ್ಥೆಗಳೊಂದಿಗೆ ಒಡಂಬಡಿಕೆ ವಾಡಿಕೊಡಲಾಗಿದೆ ಎಂದು ತಿಳಿಸಿದರು.
ಶಾಸಕ ಗಣೇಶ್ ಹುಕ್ಕೇರಿ, ಎಂಎಲ್ಸಿಗಳಾದ ಗೋವಿಂದರಾಜು, ಎ.ಪಿ. ರಂಗನಾಥ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಶಿಕ್ಷಣ ಇಲಾಖೆ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಆಯುಕ್ತೆ ಕೆ.ವಿದ್ಯಾ ಕುಮಾರ್ ಉಪಸ್ಥಿತರಿದ್ದರು.
ಅಧಿವೇಶನದಲ್ಲಿ ಚರ್ಚಿಸಿ ಕ್ರಮ
ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ಕಲ್ಪಿಸಲು ಚಿಂತಿಸಿದ್ದು, ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು. ಹಿಂದೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ಸ್ಪಂದನೆ ಸಿಗಲಿಲ್ಲ. ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿದ್ದು ರಾಷ್ಟ್ರ ಧ್ವಜದ ಗೌರವಕ್ಕೆ ಧಕ್ಕೆಯಾಗದಂತೆ ಎಚ್ಚರ ವಹಿಸಲಾಗುವುದು. ಸರ್ಕಾರಿ, ಖಾಸಗಿ ಸಂಸ್ಥೆ ಕಟ್ಟಡಗಳ ಮೇಲೆ ನಾಡಧ್ವಜ ಹಾರಿಸಲು ಅತಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದರು.
ಭಾಷೆ ರಕ್ಷಣೆಯ ರಾಯಬಾರಿಗಳಾಗಿ
ಜ್ಞಾನ, ಪರಂಪರೆ, ಸಂಸ್ಕೃತಿ, ಸರ್ವಧರ್ಮ ಪರಂಪರೆ, ಸಮಾನತೆ, ಶಾಂತಿಯ ಸಂದೇಶ ಸಾರುವ ಶಕ್ತಿ ನಾಡಧ್ವಜಕ್ಕೆ ಇದೆ. ಅದನ್ನು ಅಧಿಕೃತಗೊಳಿಸುವ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ನಾಡಿನ ಹೆಗ್ಗುರುತನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ವರ್ಷಪೂರ್ತಿ ಕನ್ನಡ ಕಾರ್ಯಕ್ರಮ
ವರ್ಷವೀಡಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷೆ ಹಿರಿಮೆ ಸಾರಲಾಗುವುದು. ಕನ್ನಡಕ್ಕೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ಶಾಸೀಯ ಸ್ಥಾನವಾನ ಸಿಕ್ಕಿದೆ, ಆ ಗೌರವವನ್ನು ಕಾಪಾಡಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದರು.
ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ
ಸರ್ಕಾರಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಖಾಲಿಯಿರುವ 15 ಸಾವಿರ ಶಿಕ್ಷಕರ ನೇಮಕಕ್ಕೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 25,498 ದ್ವಿಭಾಷ ಶಾಲೆಗಳ ಪ್ರಾರಂಭ. 250 ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ವಾಡಲಾಗಿದೆ. 6ನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಕೌಶಲ ಆಧಾರಿತ ಶಿಕ್ಷಣ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ 1ರಿಂದ10ನೇ ತರಗತಿ, ಪಿಯು ವ್ಯಾಸಂಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ವ್ಯಾಸಂಗಕ್ಕೆ ಶೇ.7 ಮೀಸಲಾತಿ ನೀಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
ಭಾಷೆ ಕಲಿಕೆಗೆ ಗಡಿಯಿಲ್ಲ. ಡಿಜಿಟಲ್ ಯುಗದಲ್ಲಿ ಮೊಬೈಲ್ ಮೂಲಕವೇ ಎಲ್ಲ ಭಾಷೆ ಬಳಸಬಹುದಾಗಿದೆ. ಭಾಷಾ ಸ್ಪರ್ಧೆಗಳ ಮಧ್ಯೆ ಕನ್ನಡ ಬೆಳೆಯಬೇಕು. ಕನ್ನಡದ ಬೇರುಗಳು ಇರುವ ಶಾಲಾ ಮಕ್ಕಳು ಭಾಷೆ ರಕ್ಷಣೆ ಮಾಡುವ ರಾಯಬಾರಿಗಳಾಗಬೇಕು. -ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
ಕನ್ನಡ ಭಾಷೆಯನ್ನು ಮತ್ತಷ್ಟು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಶಾಲಾ ಮಟ್ಟದಿಂದ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಕನ್ನಡಿಗರ ಪಾಲಿಗೆ ನ.1 ಆಚರಣೆಯ ದಿನವಲ್ಲ, ಸಂಸ್ಕೃತಿಯ ವೈಭವ, ಸ್ವಾಭಿಮಾನದ ಸಂಕೇತವಾಗಿದೆ. ಮಧು ಬಂಗಾರಪ್ಪ, ಶಿಕ್ಷಣ ಸಚಿವ