ವಿಶ್ವಕರ್ಮ ವಧು-ವರರ ಸಮಾವೇಶ 
ರಾಜ್ಯ

ಏ.24ರಿಂದ ವಿಶ್ವಕರ್ಮ ವಧು-ವರರ ಸಮಾವೇಶ

ಪ್ರಮುಖ ಮುಖ್ಯಾಂಶಗಳು

  • ಏ.24ರಿಂದ 26ರವರೆಗೆ ಮೂರು ದಿನಗಳ ಕಾಲ 3ನೇ ರಾಜ್ಯ ಮಟ್ಟದ ವಧು-ವರರ ಸಮಾವೇಶ
  • ಶಿವಾನಂದ ವೃತ್ತದ ಸಮೀಪವಿರುವ ಗುರುರಾಜ ಕಲ್ಯಾಣಮಂಟಪದಲ್ಲಿ ಸಮಾವೇಶ
  • ವರ್ಷದಲ್ಲಿ 2 ಬಾರಿ ರಾಜ್ಯಾದ್ಯಂತ ಸಮಾವೇಶ ನಡೆಸುವ ಮೂಲಕ ಸಮುದಾಯವನ್ನು ಒಗ್ಗೂಡಿಸುವ ಕೆಲಸ: ಮಹಾಸಭಾ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ತು ಸದಸ್ಯ ಕೆ.ಪಿ. ನಂಜುಂಡಿ
ಬೆಂಗಳೂರು: ವಿಶ್ವಕರ್ಮ ಸಮುದಾಯವನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಅಖಲಿ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಏ.24ರಿಂದ 26ರವರೆಗೆ ಮೂರು ದಿನಗಳ ಕಾಲ 3ನೇ ರಾಜ್ಯ ಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ತು ಸದಸ್ಯ ಕೆ.ಪಿ. ನಂಜುಂಡಿ ತಿಳಿಸಿದರು.
ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಾನಂದ ವೃತ್ತದ ಸಮೀಪವಿರುವ ಗುರುರಾಜ ಕಲ್ಯಾಣಮಂಟಪದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಈ ವರ್ಷದಿಂದ ವರ್ಷದಲ್ಲಿ ಎರಡು ಬಾರಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶ ನಡೆಸುವ ಮೂಲಕ ಸಮುದಾಯವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ವಿಶ್ವಕರ್ಮ ಸಮುದಾಯದ ಯುವಕ/ಯುವತಿಯರು, ವಿಧವೆ-ವಿಧುರರಿಗೆ ವಧು-ವರರನ್ನು ಕೊಡಿಸುವ ಜಬಾದ್ಬಾರಿ ವಹಿಸಲಾಗಿದೆ. ತಮ್ಮ ಜಾತಕಗಳನ್ನು ತಂದು ಸಮಾವೇಶದಲ್ಲಿ ಆಗಮಿಸುವವರಲ್ಲಿ ತಮ್ಮ ಸಂಬಂಧಗಳನ್ನು ಬೆಸೆದುಕೊಳ್ಳಬಹುದು ಎಂದು ತಿಳಿಸಿದರು.
ಏ.24ರಂದು ಬೆಳಗ್ಗೆ 11.30ಕ್ಕೆ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಮತ್ತು ‘ವಿಜಯವಾಣಿ’ ಸಂಪಾದಕ ಕೆ.ಎನ್. ಚನ್ನೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಏ.26ರಂದು ಸಂಜೆ 5.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.
ಸುದ್ದಿಗೋಷ್ಠಿಯಲ್ಲಿ ವಧು-ವರರ ವೇದಿಕೆ ಅಧ್ಯಕ್ಷ ಬಸವರಾಜು ಮತ್ತು ತುಮಕೂರಿನ ಸ್ವಯಂ ವಧು ಅಷ್ಟಲಕ್ಷ್ಮೀ ಮಠದ ನೀಲಕಂಠ ಸ್ವಾಮೀಜಿ ಉಪಸ್ಥಿತರಿದ್ದರು.