ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 
ರಾಜ್ಯ

ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದ ವಿಟಿಯು

ಪ್ರಮುಖ ಮುಖ್ಯಾಂಶಗಳು

  • ಮಂಗಳವಾರ ಸಂಜೆ 5.30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5.35ಕ್ಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ.
  • ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು 21 ದಿನಗಳ ಮುಂಚಿತವಾಗಿಯೇ ಮುಗಿಸಿದೆ. ಒಟ್ಟು 76.84 ಫಲಿತಾಂಶ ದಾಖಲಾಗಿದೆ.
  • ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು.
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಇಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು.
ಮಂಗಳವಾರ ಸಂಜೆ 5.30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5.35ಕ್ಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು 21 ದಿನಗಳ ಮುಂಚಿತವಾಗಿಯೇ ಮುಗಿಸಿದೆ. ಒಟ್ಟು 76.84 ಫಲಿತಾಂಶ ದಾಖಲಾಗಿದೆ.
ಈ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುತ್ತಾರೆ. ಹೀಗಾಗಿ ನಾವು ಸಾಧ್ಯವಾದಷ್ಟು ಬೇಗ ಫಲಿತಾಂಶ ಪ್ರಕಟಿಸಲು ನಿರ್ಧರಿಸಿ, ಆ ಪ್ರಕಾರ ಸಿದ್ಧತೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಈ ಕುರಿತು ವಿಟಿಯು ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಮಾತನಾಡಿ, ನಾವು ಡಿಜಿಟಲ್ ಮೌಲ್ಯಮಾಪನ ಮಾಡಲಿದ್ದು, ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಲು ಸಿದ್ಧತೆ ನಡೆಸಲಾಗಿತ್ತು. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಫಲಿತಾಂಶ ಪ್ರಕಟದ ಇತಿಹಾಸ

ವರ್ಷ ವಿದ್ಯಾರ್ಥಿಗಳ ಸಂಖ್ಯೆ ಫಲಿತಾಂಶದ ಅವಧಿ
2025-26 60,856 5 ನಿಮಿಷ
2024-25 58,232 10 ದಿನ
2023-24 49,997 11 ದಿನ
2022-23 41,835 10 ದಿನ