ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮೆಹಬೂಬ ಗೋಳಸಂಗಿ, ರಫೀಕ್ ಶಿರೋಳ ಮತ್ತಿತರರಿದ್ದರು. 
ರಾಜ್ಯ

ಸಾಮೂಹಿಕ ಪದತ್ಯಾಗ ಮಾಡುವ ಎಚ್ಚರಿಕೆ

ಪ್ರಮುಖ ಮುಖ್ಯಾಂಶಗಳು

  • ಹೈಕಮಾಂಡ್ ವಿರುದ್ಧ ಬೀದಿಗಿಳಿದ ಕಾರ್ಯಕರ್ತರು
ಮುದ್ದೇಬಿಹಾಳ : ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಹೈಕಮಾಂಡ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಪುರಸಭೆ ಅಧ್ಯಕ್ಷ ಮೆಹಬೂಬ ಗೋಳಸಂಗಿ ಮಾತನಾಡಿ, ಇಂದಿನ ಕಾಂಗ್ರೆಸ್ ಸರ್ಕಾರ ಮುದ್ದೇಬಿಹಾಳ ಕ್ಷೇತ್ರದ ಜನರ ಬೆನ್ನಿಗೆ ಚೂರಿ ಹಾಕಿದಂತಾಗಿದೆ. ಕ್ಷೇತ್ರದ ಜನತೆಗೆ ದ್ರೋಹ ಮಾಡಿ ದೇತು-ದಿಲಾತು ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಮುಖಂಡ ರಫೀಕ್ ಶಿರೋಳ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮುದ್ದೇಬಿಹಾಳ ಕ್ಷೇತ್ರದ ಜನತೆಗೆ ಅನ್ಯಾಯ ಮಾಡಿದ್ದಾರೆ.
ಸರಳ, ಸಜ್ಜನಿಕೆಯ ನಾಯಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡದೇ, ಕಾಂಗ್ರೆಸ್ ಪಕ್ಷದಲ್ಲಿ ಸೂಟ್‌ಕೇಸ್ ನೀಡಿದವರಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತದೆ ಎಂಬ ಸಂದೇಶ ನೀಡಿದ್ದಾರೆ ಎಂದು ಟೀಕಿಸಿದರು.
ಶಾಸಕ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ, ಮುದ್ದೇಬಿಹಾಳ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.