ಕೊನೇ ಕ್ಷಣದಲ್ಲಿ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಕೈ ತಪ್ಪಿದ್ದೇಕೆ? ಅಚ್ಚರಿ ಉತ್ತರ ಕೊಟ್ಟ ಕಾಂಗ್ರೆಸ್ ಹೈಕಮಾಂಡ್! Mankala Vaidya
- ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ತಪ್ಪಲು ಟೈಪಿಂಗ್ ಮಿಸ್ಟೇಕ್ ಕಾರಣ ಎಂದು ಹೈಕಮಾಂಡ್ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆಎಳೆಯಲು ಯತ್ನ
- ಪಟ್ಟಿಯಿಂದ ಮಂಕಾಳು ವೈದ್ಯರ ಹೆಸರು ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ್ ಅವರಿಗೆ ಸ್ಥಾನ ಕಲ್ಪಿಸಿದ್ದರಿಂದ ಭಟ್ಕಳ ಶಾಸಕರಿಗೆ ತೀವ್ರ ನಿರಾಶೆ
- ತಮಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಅಸಮಾಧಾನಗೊಂಡಿರುವ ಮಂಕಾಳು ವೈದ್ಯ ಇಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ
- ರಾಜ್ಯ ರಾಜಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಸಂಪನ್ನಗೊಳ್ಳಲಿದೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕನಸು ಕಂಡಿದ್ದ ಭಟ್ಕಳ ಶಾಸಕ ಮಂಕಾಳ ವೈದ್ಯರಿಗೆ ( Mankala Vaidya ) ಭಾರಿ ನಿರಾಶೆ ಉಂಟಾಗಿದೆ. ಕೊನೇ ಕ್ಷಣದಲ್ಲಿ ವೈದ್ಯರ ಹೆಸರನ್ನು ಕೈಬಿಟ್ಟು ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.
ಆರಂಭದಲ್ಲಿ ಎಐಸಿಸಿ ಬಿಡುಗಡೆ ಮಾಡಿದ 20 ಸಚಿವರ ಪಟ್ಟಿಯಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರ ಹೆಸರಿತ್ತು. ಆದರೆ, ಕೊನೇ ಕ್ಷಣದಲ್ಲಿ ಟ್ವಿಸ್ಟ್ ಎನ್ನುವಂತೆ ಮಂಕಾಳ ವೈದ್ಯರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸ್ಥಾನ ನೀಡಲಾಗಿದೆ. ಇದರಿಂದ ಸಚಿವ ಸ್ಥಾನದ ಆಸೆಯಲ್ಲಿದ್ದ ಮಂಕಾಳ ವೈದ್ಯರಿಗೆ ಭಾರಿ ನಿರಾಶೆ ಉಂಟಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಕಾರಣವೇನು?
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಇದು ಟೈಪಿಂಗ್ ಮಿಸ್ಟೇಕ್ನಿಂದ ಆದ ಎಡವಟ್ಟು ಎಂದಿದೆ. ಆರಂಭದಲ್ಲಿ ಪಟ್ಟಿಯಲ್ಲಿ ಮಂಕಾಳ ವೈದ್ಯರ ಹೆಸರು ಇರಲಿಲ್ಲ. ಟೈಪಿಂಗ್ ಮಾಡುವಾಗ ಮಿಸ್ಟೇಕ್ ಆಗಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆಎಳೆಯುವ ಪ್ರಯತ್ನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ.
ಇನ್ನು ತಮಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಂಕಾಳ ವೈದ್ಯರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ನೂತನ ಸಚಿವರ ಪಟ್ಟಿ
7. B. Z. ಜಮೀರ್ ಅಹಮದ್ ಖಾನ್
12. ಎಸ್.ಎಸ್. ಮಲ್ಲಿಕಾರ್ಜುನ್ ( ಆರಂಭದಲ್ಲಿ ಮಂಕಾಳ ವೈದ್ಯರ ಹೆಸರಿತ್ತು)
17. ಶ್ರೀಮತಿ. ಗಾಯತ್ರಿ ಶಾಂತೇಗೌಡ
ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ. ಪಕ್ಷದ ಹೈಕಮಾಂಡ್ ನಾಯಕರು ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವಾಗ ಜಾತಿ, ಧರ್ಮ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಹಾಗೂ ವಿವಿಧ ಸಾಮಾಜಿಕ ವರ್ಗಗಳ ನಡುವಿನ ಸಮತೋಲನವನ್ನು ಎಚ್ಚರಿಕೆಯಿಂದ ಪರಿಗಣಿಸಿದ್ದಾರೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಆರು ಮಂದಿಗೆ ಪುನಃ ಅವಕಾಶ ಕಲ್ಪಿಸಿಕೊಡಲಾಗಿದೆ. ಸದ್ಯಕ್ಕೆ ನೂತನ ಸಚಿವರು ಯಾರೆಂದು ತಿಳಿದಿದ್ದು, ಇನ್ನೂ ಯಾರಿಗೆ ಯಾವ ಖಾತೆ ಎಂಬ ಸಸ್ಪೆನ್ಸ್ ಮಾತ್ರ ಹಾಗೇ ಉಳಿದಿದೆ.
ಇದೇ ವೇಳೆ ಜಿ.ಎಸ್.ಪಾಟೀಲ್ ಅವರಿಗೆ ಸ್ಪೀಕರ್ ಹಾಗೂ ಪೊನ್ನಣ್ಣ ಅವರಿಗೆ ಉಪ ಸಭಾಧ್ಯಕ್ಷ ಸ್ಥಾನ ಒಲಿಯಲಿದೆ. ಇನ್ನೂ ವಿಧಾನ ಪರಿಷತ್ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನೂ ಈ ಬಾರಿ ಮಾಜಿ ಸಚಿವೆ ಲಕ್ವ್ಮೀ ಹೆಬ್ಬಾಳ್ಕರ್ ಹಾಗೂ ಎಂ.ಸಿ .ಸುಧಾಕರ್ ಅವರಿಗೆ ಭಾರಿ ನಿರಾಸೆ ಉಂಟಾಗಿದೆ. ಇನ್ನೂ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಕೆ.ಎಂ.ಶಿವಲಿಂಗೇಗೌಡರಿಗೆ ಕೊನೆಗೂ ಸಚಿವ ಸ್ಥಾನ ಒಲಿದಿದೆ.
ಜೂನ್ 3 ರಂದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಚರ್ಚೆಯಲ್ಲಿದ್ದ ಈ ಸಂಪುಟ ವಿಸ್ತರಣೆಯು ಜುಲೈ 31 ರಂದು ನಡೆಯಬೇಕಿತ್ತು, ಆದರೆ ದೆಹಲಿಯಲ್ಲಿ ನಡೆದ ನಾಯಕರ ಸಭೆಯ ಬಳಿಕ ಇದು ಇಂದಿಗೆ ಮುಂದೂಡಲ್ಪಟ್ಟಿತ್ತು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸಿಎಂ ಡಿ.ಕೆ. ಶಿವಕುಮಾರ್ ಜೊತೆಗೆ ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಬಿ.ಕೆ. ಹರಿಪ್ರಸಾದ್ ಅವರು ಈ ಸಂಪುಟ ವಿಸ್ತರಣೆಯ ಸಮಾಲೋಚನಾ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಿದ್ದರು.