Willpower is important for politicians.
ಶಿರಾ: ಯಾವುದೇ ದೇಶ ಅಭಿವೃದ್ಧಿಯಾಗಲು ಶಿಕ್ಷಣ ಮುಖ್ಯ. ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಬೇಕೆಂದು ಪ್ರತಿ ವರ್ಷ ಒಂದೊಂದು ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ವರ್ಷಕ್ಕೊಂದು ನೂತನ ಶಾಲಾ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಶಿರಾ ಶಿರಾ ನಗರದ ಸರ್ಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಮೊದಲ ಮಹಡಿಯ ನೂತನ ಕಟ್ಟಡ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪ್ರಯೋಗಾಲಯ, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಗೃಹ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ರಾಜಕಾರಿಗಳಿಗೆ ಇಚ್ಛಾಶಕ್ತಿ ಮುಖ್ಯ. ಮುಂದಿನ ದಿನಗಳಲ್ಲಿ ಈ ಶಾಲೆಯನ್ನು ಕೆಪಿಸ್ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ತುಮಕೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಆರ್ಶೀವಚನ ನೀಡಿ, ಚಿದಾನಂದ್ ಎಂ.ಗೌಡ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಖಾಸಗಿ ಶಾಲೆಗಳನ್ನು ನಾಚಿಸುವ ರೀತಿಯಲ್ಲಿ ಶಾಲೆ ನಿರ್ಮಾಣ ಮಾಡಿ ನಿಜಾರ್ಥದಲ್ಲಿ ಜನಪ್ರತಿನಿಧಿಗಳಾಗಿದ್ದಾರೆ ಎಂದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಮಾತಾಡಿದರು. ಬಿಇಒ ಕೃಷ್ಣಪ್ಪ, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ನಗರಸಭೆ ಸದಸ್ಯರಾದ ಅಂಬುಜಾ, ಉಮಾ ವಿಜಯರಾಜ್, ಸುಶೀಲಾ ವಿರೂಪಾಕ್ಷ, ಮಾಜಿ ಸದಸ್ಯ ಸಂತೇಪೇಟೆ ನಟರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ಹನುಮಂತರಾಜು, ತಾಪಂ ಮಾಜಿ ಸದಸ್ಯ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಈರಣ್ಣ ಪಟೇಲ್, ಆರೋಗ್ಯ ರಾ ಸಮಿತಿ ಮಾಜಿ ಸದಸ್ಯ ಹನುಮಂತನಾಯ್ಕ ಹಾಗೂ ಮುಖಂಡರು, ಶಿಕ್ಷಕರು ಇದ್ದರು.