ಮಹಿಳೆಯರಿಗಿದೆ ಸಮಸ್ಯೆಗಳ ನಿವಾರಣೆ ಹೊಣೆ Women
- ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿಕೆ
- ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
ಶ್ರೀನಿವಾಸಪುರ: ಮಹಿಳೆಯರು ಹೊಲಿಗೆ ಯಂತ್ರಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢವಾಗಿಕುಟುಂಬಗಳನ್ನು ನಿರ್ವಹಿಸಿಕೊಂಡು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು. Women
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ದೇವರಾಜ ಅರಸು ನಿಗಮದಿಂದ 2024&25 ಸಾಲಿನ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ, ಮಹಿಳೆಯರು ಕುಟುಂಬದ ಶಕ್ತಿ. ಹಲವಾರು ಸಮಸ್ಯೆಗಳನ್ನು ನಿಭಾಯಿಸುವ ಜವಾಬ್ದಾರಿ ನಿಮಗೆ ಇರುತ್ತದೆ. ಯಂತ್ರ ತರಬೇತಿ ಹೊಂದಿರುವ ನೀವು ಸ್ವಯಂ ಉದ್ಯೋಗ ಕಲ್ಪಿಸಿಕೊಂಡು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ದೇವರಾಜ ಅರಸು ನಿಗಮ ಅಧಿಕಾರಿ ಚಲಪತಿ ಮಾತನಾಡಿ, ಸರ್ಕಾರ ನಿಮ್ಮ ಆರ್ಥಿಕ ಜೀವನ ಮಟ್ಟ ಸುಧಾರಿಸಿಕೊಳ್ಳಲು ನಿಗಮದಿಂದ ಹೊಲಿಗೆ ಯಂತ್ರ ನೀಡುತ್ತಿದೆ.ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಒಂದು ವೇಳೆ ಬೇರೆಯವರಿಗೆ ಮಾರಾಟ ಮಾಡಿದ್ದು, ತಿಳಿದು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
19 ಮಂದಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.
ಮುಖಂಡರಾದ ಪೂಲು ಶಿವಾರೆಡ್ಡಿ, ಮುನು ಮಹೇಶ್, ಮಣಿಗಾನಹಳ್ಳಿ ವೆಂಕಟೇಶ್ ಇತರರು ಇದ್ದರು.