DK Shivakumar 
ರಾಜ್ಯ

ಪದ ಶಕ್ತಿಯೇ ವಿಶ್ವ ಶಕ್ತಿ... ಅಧಿಕಾರ ಹಂಚಿಕೆ ವಿಚಾರ ತೀವ್ರಗೊಂಡ ಬೆನ್ನಲ್ಲೇ ಡಿಕೆಶಿ ಮಾರ್ಮಿಕ ಪೋಸ್ಟ್​!

ಪ್ರಮುಖ ಮುಖ್ಯಾಂಶಗಳು

  • ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರಗೊಂಡ ಬೆನ್ನಲ್ಲೇ ಡಿಕೆಶಿ ಪೋಸ್ಟ್​
  • ದೀಗ ಈ ಪೋಸ್ಟ್​ ರಾಜಕೀಯ ವಲಯದಲ್ಲಿ ಎಲ್ಲರ ಗಮನ ಸೆಳೆದಿದೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ತೀವ್ರಗೊಂಡ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಗುರುವಾರ ಮಾರ್ಮಿಕ ಪೋಸ್ಟ್​ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಿನ್ನೆಯಷ್ಟೆ ರಾಹುಲ್​ ಗಾಂಧಿ ಕಡೆಯಿಂದ ಪ್ಲೀಸ್​ ವೈಟ್​ ಎಂಬ ಸಂದೇಶ ಬಂದಿದ್ದು, ಇದೀಗ ಈ ಪೋಸ್ಟ್​ ರಾಜಕೀಯ ವಲಯದಲ್ಲಿ ಎಲ್ಲರ ಗಮನ ಸೆಳೆದಿದೆ.

ಸಂದೇಶಲ್ಲೇನಿದೆ?

"ಪದ ಶಕ್ತಿಯೇ ವಿಶ್ವ ಶಕ್ತಿ.(ವರ್ಡ್ ಪವರ್ ಈಸ್ ವರ್ಲ್ಡ್ ಪವರ್) ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಜಗತ್ತಿನ ಅತಿದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನು ಸೇರಿದಂತೆ ಬೇರೆ ಯಾರೇ ಆಗಿರಲಿ, ಎಲ್ಲರೂ ಹೇಳಿದಂತೆ ನಡೆಯಬೇಕು. ಪದ ಶಕ್ತಿಯೇ ವಿಶ್ವ ಶಕ್ತಿ" ಎಂದು ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ್ದಾರೆ.
ಅಧಿಕಾರ ಹಂಚಿಕೆ ಬಗ್ಗೆ ಗುಟ್ಟನ್ನು ಬಿಟ್ಟುಕೊಡದ ಡಿಕೆ ಶಿವಕುಮಾರ್, ‘ರಾಹುಲ್ ಗಾಂಧಿಯವರು ನನ್ನೊಂದಿಗೆ ಏನು ಮಾತನಾಡಿದ್ದಾರೆ ಎಂಬುದು ನಿಮ್ಮ ಬಳಿ (ಮಾಧ್ಯಮ) ಹೇಳುವ ವಿಚಾರವಲ್ಲ, ಇದರ ಅವಶ್ಯಕತೆಯೂ ಇಲ್ಲ’ ಎಂದಿದ್ದಾರೆ. ಆದರೆ, ನಮ್ಮ ಗುರಿ ಮುಂದಿನ ಲೋಕಸಭೆ ಎಲೆಕ್ಷನ್​ನಲ್ಲಿ ಕರ್ನಾಟಕದಲ್ಲಿ 28 ಸೀಟು ಪಡೆಯುವುದು ಮತ್ತು ದೇಶದಲ್ಲಿ ರಾಹುಲ್ ಗಾಂಧಿಯವರನ್ನು ಪಿಎಂ ಮಾಡುವುದಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ ತೀವ್ರ ಪೈಪೋಟಿ ನಡೆಯುತ್ತಿದೆ. ನವೆಂಬರ್ 20 ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯ ಅರ್ಧವನ್ನು(2.5 ವರ್ಷ) ಕಂಪ್ಲೀಟ್​ ಆಗಿದೆ. ಈ ಸಂದರ್ಭದಲ್ಲಿ ಶಿವಕುಮಾರ್​ ಅವರ ಈ ಎಕ್ಸ್​ ಸಂದೇಶ ಹೊರ ಬಿದ್ದಿದ್ದು, 2023 ರ ವಿಧಾನಸಭಾ ಚುನಾವಣೆಯ ನಂತರ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ "ಅಧಿಕಾರ ಹಂಚಿಕೆ" ಒಪ್ಪಂದ ನಡೆದಿದೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದಂತಿದೆ.