ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಶಿವ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಶಾಂತವೀರ ಸ್ವಾಮೀಜಿ, ಧರ್ಮಸ್ಥಳ ಗ್ರಾವಾಭಿವೃದ್ಧಿ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರವೀಣ್ ಕುವಾರ್, ಯೋಜನಾಧಿಕಾರಿ ಶಶಿಧರ್, ಆರ್.ಎಂ.ಸಿ. ವಾಜಿ ಅಧ್ಯಕ್ಷ ಪಿ.ಟಿ. ಗೋವಿಂದಪ್ಪ ಇದ್ದರು. 
ರಾಜ್ಯ

ಸವಾಜದ ಒಳಿತಿಗಾಗಿ ಕೆಲಸ ಮಾಡಿ

ಐ.ಡಿ ಹಳ್ಳಿ :ಧರ್ಮ ಮತ್ತು ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವಾತ್ರ ಮನುಷ್ಯನ ಬದುಕಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಕುಂಚಗಿರಿ ಕ್ಷೇತ್ರದ ಜಗದ್ಗುರು ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ತಿಳಿಸಿದರು.
ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿಯ ಸಪ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಶಿವ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಾತನಾಡಿ, ಧಾರ್ಮಿಕ ಆಚರಣೆಗಳು ಕೇವಲ ಪೂಜಾ ವಿಧಿವಿಧಾನಗಳಿಗೆ ಸೀಮಿತವಾಗದೆ, ಮನುಷ್ಯನಲ್ಲಿ ಉತ್ತಮ ಚಿಂತನೆ ಮತ್ತು ವಾನವೀಯ ಮೌಲ್ಯ ಬೆಳೆಸುವಂತಿರಬೇಕು ಎಂದರು.
ಧಾರ್ಮಿಕ ಕಾರ್ಯಕ್ರಮಗಳು ಗ್ರಾಮೀಣ ಜನರನ್ನು ಒಗ್ಗೂಡಿಸುವ ಜತೆಗೆ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹೋದರತ್ವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ದೇವರ ಆರಾಧನೆಯೊಂದಿಗೆ ಸವಾಜದ ಒಳಿತಿಗಾಗಿ ಕೆಲಸ ವಾಡುವ ಮನೋಭಾವ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಧರ್ಮದ ವಾರ್ಗದಲ್ಲಿ ಸಾಗುವುದರಿಂದ ಮನುಷ್ಯನ ವ್ಯಕ್ತಿತ್ವ ವಿಕಸನಗೊಳ್ಳುವುದರ ಜತೆಗೆ ಸವಾಜದಲ್ಲಿ ಉತ್ತಮ ವಾತಾವರಣ ನಿರ್ವಾಣವಾಗುತ್ತದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್ ವಾತನಾಡಿ, ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಧಾರ್ಮಿಕ, ಸಾವಾಜಿಕ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿರುವುದು ಶ್ಲಾನೀಯ. ಜನರಲ್ಲಿ ಸಾವಾಜಿಕ ಜವಾಬ್ದಾರಿ, ಶಿಸ್ತು, ಸ್ವಾವಲಂಬನೆ ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶಿವ ಸಹಸ್ರ ಬಿಲ್ವಾರ್ಚನೆ ಸೇರಿ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿದವು. ಟಿಎಪಿಸಿಎಂಎಸ್ ವಾಜಿ ಉಪಾಧ್ಯಕ್ಷ ಶನಿವಾರಂರೆಡ್ಡಿ, ವಿಎಸ್ಸೆಸ್ಸೆಎನ್ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಶ್ರೀಧರ್, ರವಿಶಂಕರ್, ನಾಗರಾಜಯ್ಯ, ಫಕೃದ್ದೀನ್, ಮುಖಂಡರಾದ ಜಿಲಾನ್, ನಾಗರಾಜು, ಸಿದ್ದಲಿಂಗಯ್ಯ, ವಜೀರ್ ಸಾಬ್, ಅಶೋಕ್ ರೆಡ್ಡಿ ಇದ್ದರು.