ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂದ ಜಿಲ್ಲಾ ಟದ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಯಾದ ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ಅವರನ್ನು ಬುಧವಾರ ಸನ್ಮಾನಿಸಲಾಯಿತು. ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಗೂಳಪ್ಪ ಎಸ್​.ಮಲ್ಹಾರ, ರಾಚಯ್ಯ ಸ್ವಾಮಿ ಬಾಡಿಯಾಲ, ಬಸವರಾಜ ಭರಮಶೆಟ್ಟಿ ಇತರರಿದ್ದರು. 
ರಾಜ್ಯ

ಸೇವಾ ಮನೋಭಾವನೆದಿಂದ ಕೆಲಸ ಮಾಡಿ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಗುರು ಲಿಂಗಾರೆಡ್ಡಿ ನಾಯಕ ಸಲಹೆ
  • > ಉಪನ್ಯಾಸಕರ ಸಂಘದ ಕಾರ್ಯದರ್ಶಿ ಡೊಣ್ಣೆಗೌಡಗೆ ಸನ್ಮಾನ
ಸೈದಾಪುರ: ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ಸೇವಾ ಮನೋಭಾನವದಿಂದ ಕಾರ್ಯ ನಿರ್ವಹಿಸುವ ಮೂಲಕ ಉಪನ್ಯಾಸಕರ ಸಂದ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಮುಖ್ಯಗುರು ಲಿಂಗಾರೆಡ್ಡಿ ನಾಯಕ ಹೇಳಿದರು.
ಪಟ್ಟಣದ ವಿದ್ಯಾವರ್ಧಕ ಸಂಸ್ಥೆಯ ವಿವಿಧ ವಿಭಾಗಗಳಿಂದ ಬುಧವಾರ ಹಮ್ಮಿಕೊಂಡ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂದ ಜಿಲ್ಲಾ ಟಕದ ಕಾರ್ಯದರ್ಶಿಗಳಾಗಿ ಅವಿರೋಧ ಆಯ್ಕೆಯಾದ ಸಂಸ್ಥೆ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು.
ಕೊಟ್ಟ ಅವಕಾಶವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಪ್ರಯತ್ನಿಸಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಹತ್ವ ದೊರೆಯುತ್ತದೆ. ಸಂದ ಅಭಿವೃದ್ಧಿಯಲ್ಲಿ ನಿಮ್ಮದೆಯಾದ ಪ್ರಮುಖ ಪಾತ್ರ ನಿರ್ವಹಣೆ ಮಾಡುವಂತಾಗಲಿ ಎಂದು ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ ಡೊಣ್ಣೆಗೌಡ, ಇದರಿಂದ ನನ್ನ ಜವಬ್ದಾರಿ ಹೆಚ್ಚಾಗುವಂತೆ ಮಾಡಿದೆ. ಕಾರ್ಯದರ್ಶಿ ಸ್ಥಾನಕ್ಕೆ ನನ್ನನ್ನು ಅವಿರೋಧ ಆಯ್ಕೆಯಾಗಿರುವುದಕ್ಕೆ ಕಾರಣರಾದ ಎಲ್ಲರ ಭರವಸೆಯಂತೆ ಹಿರಿಯ ಮಾರ್ಗದರ್ಶನದೊಂದಿಗೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಈ ವೇಳೆ ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಶಿಕ್ಷಕರಾದ ಗೂಳಪ್ಪ.ಎಸ್​.ಮಲ್ಹಾರ, ರಾಚಯ್ಯ ಸ್ವಾಮಿ ಬಾಡಿಯಾಲ, ಬಸವರಾಜ ಭರಮಶೆಟ್ಟಿ, ಭೀಮಣ್ಣ ನಾಯಕ, ಸತೀಶ ಪುರ್ಮಾಂ, ಸಂಗಾರೆಡ್ಡಿ ಪಾಟೀಲ್​, ಭರತಕುಮಾರ, ಸೌಭಾಗ್ಯ ಇತರರಿದ್ದರು.