ಗುರುಮಠಕಲ್​ ತಾಲೂಕಿನ ಕಂದಕೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಸಂಯೋಜಕ ರಾವೇಂದ್ರ, ಸಂತೋಷ ಚವ್ಹಾಣ್​, ಸಿದ್ದಪ್ಪ ಇತರರಿದ್ದರು. 
ರಾಜ್ಯ

ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ

ಗುರುಮಠಕಲ್​: ಕೂಲಿ ಕಾರ್ಮಿಕರು ಬರೀ ಕೆಲಸದಲ್ಲಿ ತೊಡಗಿಕೊಂಡರೆ ಸಾಲದು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಗುರುಮಠಕಲ್​ ತಾಪಂ ಸಂಯೋಜಕ ರಾವೇಂದ್ರ ಹೇಳಿದರು.
ತಾಲೂಕಿನ ಕಂದಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಜಲಾಲ್​ ಸಾಬ್​ ದರ್ಗಾದ ಬಳಿ ನಡೆಯುತ್ತಿರುವ ಹಳ್ಳದ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಐಇಸಿ ಚಟುವಟಿಕೆಗಳಡಿ ಮನರೇಗಾ ಕೂಲಿಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಸಂತೋಷ ಚವ್ಹಾಣ್​ ಮಾತನಾಡಿ, ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಓಆರ್​ಎಸ್​ ಕಡ್ಡಾಯವಾಗಿ ಇಡಬೇಕು. ಸಮಯಕ್ಕೆ ಸರಿಯಾಗಿ ಊಟ, ನಿದ್ದೆ ಜತೆಗೆ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾತ್ರೆ ತೆಗೆದುಕೊಳ್ಳಬೇಕು. ಅಲ್ಲದೆ ಪ್ರತಿಯೊಬ್ಬರೂ ಆರೋಗ್ಯದ ಕಾಳಜಿ ವಹಿಸಬೇಕು ಎಂದರು.
ಈ ವೇಳೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ರಕ್ತಹಿನತೆ ತಪಾಸಣೆ ಮಾಡಲಾಯಿತು. ಮಂಡಿ ನೋವು, ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯ ಲಕ್ಷಣ ಪತ್ತೆಯಾದ ಕೂಲಿಕಾರರನ್ನು ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲು ತಿಳಿಸಲಾಯಿತು.
ಆರೋಗ್ಯ ಇಲಾಖೆ ಎಚ್​ಐಒ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು ಕೂಲಿ ಕಾರ್ಮಿಕರು ಬರೀ ಕೆಲಸದಲ್ಲಿ ತೊಡಗಿಕೊಂಡರೆ ಸಾಲದು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಗುರುಮಠಕಲ್​ ತಾಪಂ ಸಂಯೋಜಕ ರಾವೇಂದ್ರ ಹೇಳಿದರು.
ತಾಲೂಕಿನ ಕಂದಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಜಲಾಲ್​ ಸಾಬ್​ ದರ್ಗಾದ ಬಳಿ ನಡೆಯುತ್ತಿರುವ ಹಳ್ಳದ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಐಇಸಿ ಚಟುವಟಿಕೆಗಳಡಿ ಮನರೇಗಾ ಕೂಲಿಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಸಂತೋಷ ಚವ್ಹಾಣ್​ ಮಾತನಾಡಿ, ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಓಆರ್​ಎಸ್​ ಕಡ್ಡಾಯವಾಗಿ ಇಡಬೇಕು. ಸಮಯಕ್ಕೆ ಸರಿಯಾಗಿ ಊಟ, ನಿದ್ದೆ ಜತೆಗೆ ರಕ್ತದ ಒತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾತ್ರೆ ತೆಗೆದುಕೊಳ್ಳಬೇಕು. ಅಲ್ಲದೆ ಪ್ರತಿಯೊಬ್ಬರೂ ಆರೋಗ್ಯದ ಕಾಳಜಿ ವಹಿಸಬೇಕು ಎಂದರು.
ಈ ವೇಳೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ರಕ್ತಹಿನತೆ ತಪಾಸಣೆ ಮಾಡಲಾಯಿತು. ಮಂಡಿ ನೋವು, ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯ ಲಕ್ಷಣ ಪತ್ತೆಯಾದ ಕೂಲಿಕಾರರನ್ನು ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲು ತಿಳಿಸಲಾಯಿತು.
ಆರೋಗ್ಯ ಇಲಾಖೆ ಎಚ್​ಐಒ ಸಿದ್ದಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.