ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪೊಲೀಸ್ ನೇಮಕಾತಿಗೆ ಲಿಖಿತ ಪರೀಕ್ಷೆ ಕುರಿತು ಜಿಲ್ಲಾಽಕಾರಿ ಸಂಗಪ್ಪ ಎಂ.ಸಭೆ ಜರುಗಿತು. ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ ಇದ್ದರು.
ಜಿಲ್ಲೆಯಲ್ಲಿ ಆ.೨ ರಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮ, ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಎಲ್ಲ ರೀತಿಯ ಕ್ರಮಕೈಗೊಳ್ಳುವಂತೆ ಜಿಲ್ಲಾಽಕಾರಿ ಸಂಗಪ್ಪ ಎಂ. ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪೊಲೀಸ್ ನೇಮಕಾತಿಗೆ ಲಿಖಿತ ಪರೀಕ್ಷೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಿಖಿತ ಪರೀಕ್ಷೆಗೆ ಒಟ್ಟು ೨೭ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಗಲಕೋಟೆ ನಗರದಲ್ಲಿ ೧೮ ಪರೀಕ್ಷಾ ಕೇಂದ್ರಗಳಲ್ಲಿ ೮೧೯೩ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಜಮಖಂಡಿ ನಗರದಲ್ಲಿ ಸ್ಥಾಪಿಸಲಾದ ೯ ಪರೀಕ್ಷಾ ಕೇಂದ್ರಗಳಲ್ಲಿ ೪೭೦೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟಾರೆಯಾಗಿ ಒಟ್ಟು ೧೨೮೯೯ ಅಭ್ಯರ್ಥಿಗಳು ಇದ್ದಾರೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ, ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಗೃಹ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯ ಸಮಪರ್ಕವಾಗಿ ಕಲ್ಪಿಸುವಂತೆ ಜಿಲ್ಲಾಽಕಾರಿಗಳು ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಅಭ್ಯರ್ಥಿಗಳ ಪರಿಶೀಲನೆ, ಪ್ರವೇಶ ವ್ಯವಸ್ಥೆ, ಸಿಸಿಟಿವಿ ನಿಗಾ ಹಾಗೂ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬAಽಸಿದ ಇಲಾಖೆಗಳ ಅಽಕಾರಿಗಳಿಗೆ ನಿರ್ದೇಶನ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಹೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಸರಬರಾಜು ಕಲ್ಪಿಸಲಿ ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಜಾಮರ್ ಅಳವಡಿಕೆ, ಅಭ್ಯರ್ಥಿಗಳ ಫ್ರಿಸ್ಕಿಂಗ್, ಕ್ಯೂಆರ್ ಕೋಡ ಆಧಾರಿತ ಗುರುತು ಪರಿಶೀಲನೆ, ವಸ್ತçಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನ, ಪೊಲೀಸ್ ಬಂದೋಬಸ್ತಗಾಗಿ ಸಂಬAಽಸಿದ ಅಽಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಝರಾಕ್ಸ ಕೇಂದ್ರಗಳು, ಸೈಬರ್ ಸೆಂಟರ್ ಹಾಗೂ ಇತರೆ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಹಾಗೂ ಅಗತ್ಯವಿದ್ದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ ರಡಿ ಹೊರಡಿಸಲಾದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಕಾಂಬಳೆ, ಕೆ.ಎಸ್.ಆರ್.ಟಿ.ಸಿಯ ಜಿಲ್ಲಾ ವಿಭಾಗೀಯ ನಿಯಂತ್ರಣಾಽಕಾರಿ ಎನ್.ಟಿ.ಪಾಟೀಲ ಸೇರಿದಂತೆ ಪರೀಕ್ಷಾ ಮುಖ್ಯ ಅಽÃಕ್ಷಕರು, ಜಾಗೃತದ ದಳದವರು, ಮಾರ್ಗಾಽಕಾರಿಗಳು ಉಪಸ್ಥಿತರಿದ್ದರು.