ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ  
ರಾಜ್ಯ

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ದಿಢೀರ್ ರಾಜೀನಾಮೆ!...ಪತ್ರದಲ್ಲೇನಿದೆ..?

ವಿಜಯಪುರ: ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ (Yashvanthraygoud Patil) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭಾ ಸಭಾಧ್ಯಕ್ಷರಾದ ಜಿ ಎಸ್ ಪಾಟೀಲ್ ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.

ವಿಜಯಪುರ: ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ (Yashvanthraygoud Patil) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭಾ ಸಭಾಧ್ಯಕ್ಷರಾದ ಜಿ ಎಸ್ ಪಾಟೀಲ್ ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.

ರಾಜೀನಾಮೆ ಪತ್ರದಲ್ಲೇನಿದೆ..?

2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಂಡಿ ತಾಲೂಕು ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ಆರಂಭದಲ್ಲಿ ಬಿದ್ದ ಅಲ್ಪಸ್ವಲ್ಪ ಮಳೆಗೆ ರೈತರು ಸಾಲ ಮಾಡಿ ಬೀಜ ಹಾಗೂ ಗೊಬ್ಬರಗಳನ್ನು ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ ಸಕಾಲಕ್ಕೆ ಮಳೆಯಾಗದ ಪರಿಣಾಮ ಬೆಳೆಗಳೆಲ್ಲ ಒಣಗಿ ಹೋಗಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ.

ಯಶವಂತರಾಯಗೌಡ ಪಾಟೀಲ ರಾಜೀನಾಮೆ ಪತ್ರ

ಈ ಕುರಿತು ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಆಗಸ್ಟ್ 28 ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಹೊರತುಪಡಿಸಿ, ರಾಜ್ಯದ 188 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ.

ನಮ್ಗೆ ಹೀಗಾದ್ರೆ ಹೇಗೆ..?

ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಸರ್ಕಾರಕ್ಕೆ ಮುಜುಗರವಾಗಬಾರದೆಂದು ಹಲವು ಬಾರಿ ಮನವಿ ಮಾಡಿಕೊಂಡರೂ ಭಾವನೆಗಳಿಗೆ ಯಾರೂ ಸ್ಪಂದಿಸಿಲ್ಲ. ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಮತ್ತು ಒತ್ತಡ ತಂತ್ರ ಬಳಸುವವರಿಗೆ ಮಾತ್ರ ಮನ್ನಣೆ ಸಿಗುತ್ತಿದ್ದು, ಸೌಮ್ಯ ಸ್ವಭಾವದವರ ಕಾರ್ಯಗಳಿಗೆ ಬೆಲೆಯಿಲ್ಲದಂತಾಗಿದೆ. ಕ್ಷೇತ್ರದ ಜನರ ಆಶೋತ್ತರಗಳಿಗೆ ಹಾಗೂ ಕಷ್ಟಗಳಿಗೆ ಶಾಸಕನಾಗಿ ಸ್ಪಂದಿಸಲು ಸಾಧ್ಯವಾಗದ ಕಾರಣ, ತಾವು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಇದನ್ನು ತಕ್ಷಣವೇ ಅಂಗೀಕರಿಸಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್​ ಜಿ ಎಸ್ ಪಾಟೀಲ್ ಅವರು, ರಾಜೀನಾಮೆ ಪತ್ರವು ನಿಯಮಬದ್ಧವಾಗಿಲ್ಲದ ಕಾರಣ ಅಂಗೀಕಾರ ಮಾಡಿಲ್ಲ ಎಂದು ತಿಳಿಸಿದ್ದಾರೆ.