ಹುಮನಾಬಾದ್ ನ್ಯಾಯಲಾಯದ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರುಣೆ ಉದ್ಘಾಟಿಸಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋಷ ಬಿ., ಪ್ರಮುಖರಾದ ಪ್ರಶಾಂತ ಮಠ, ಆನಂದ, ಮಂಜುನಾಥ ರೆಡ್ಡಿ, ಅನಿತಾ ಪ್ರಭಾ, ವಿಜಯಕುಮಾರ ನಾತೆ ಇತರರಿದ್ದರು.
ಹುಮನಾಬಾದ್: ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯರಾದ ಕಾಂತ ಕುರುಣೆ ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂ, ಯೋಗ ಗುರುಗಳು, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗವು ಮಾನಸಿಕ ನೆಮ್ಮದಿ, ಏಕಾಗ್ರತೆ ಮತ್ತು ದೈಹಿಕ ಸದೃಢತೆಗೆ ನೆರವಾಗುತ್ತದೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗದ ಮಹತ್ವ ಅಪಾರವಾಗಿದ್ದು, ಯುವಜನರು ಸೇರಿದಂತೆ ಎಲ್ಲ ವಯೋಮಾನದವರು ಯೋಗಾಭ್ಯಾಸವನ್ನು ದಿನಚರಿಯ ಭಾಗವಾಗಿಸಿಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂತೋಷ ಬಿ. ಮಾತನಾಡಿ, ಯೋಗವು ಭಾರತೀಯ ಸಂಸತಿಯ ಅಮೂಲ್ಯ ಕೊಡುಗೆಯಾಗಿದ್ದು, ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಯೋಗ ಗುರು ಆನಂದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನ ಹಾಗೂ ಪ್ರಾಣಾಯಾಮ ಪ್ರದರ್ಶನ ನಡೆಯಿತು. ಪೊಲೀಸ್ ಉಪನಿರೀಕ ಸುರೇಶಕುಮಾರ, ಅರಣ್ಯ ಇಲಾಖೆಯ ಐಶ್ವರ್ಯಾ, ಹಿರಿಯ ವಕೀಲ ಪ್ರಶಾಂತ ಮಠ, ತಾಲೂಕು ವಕೀಲರ ಸಂದ ಅಧ್ಯ ಮಂಜುನಾಥ ರೆಡ್ಡಿ, ಉಪಾಧ್ಯೆ ಅನಿತಾ ಎಂ. ಪ್ರಭಾ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಾತೆ ಇತರರು ಪಾಲ್ಗೊಂಡಿದ್ದರು.