Young man dies in bike accident
ಚಿಂತಾಮಣಿ: ತಾಲೂಕಿನ ಬೈನಹಳ್ಳಿ ಗೇಟ್ ಬಳಿ ಬೈಕ್ ಅಪಘಾತವಾಗಿದ್ದು, ಹಿಂಬದಿ ಕುಳಿತ್ತಿದ್ದ ಸವಾರನ ತಲೆಗೆ ತೀವ್ರ ಪೆಟ್ಟು ಬಿದ್ದು ಸೋಮವಾರ ಮೃತಪಟ್ಟಿದ್ದಾನೆ.
ಬೈನಹಳ್ಳಿಯ ನಂದನ್ ಕುಮಾರ್ (23) ಮೃತ. ಬೈಕ್ ಚಾಲನೆ ಮಾಡುತ್ತಿದ್ದ ಅದೇ ಗ್ರಾಮದ ನಂದೀಶ್ ಚಿಂತಾಮಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸೋಮವಾರ ಬೆಳಗ್ಗೆ ನಂದನ್ ಕುಮಾರ್ ತೋಟದ ಬಳಿ ಹಾಲು ಕರೆದುಕೊಂಡು ಬರಲು ನಂದೀಶ್ ಬೈಕ್ನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿ ಕಲ್ಲಿಗೆ ಗುದ್ದಿದ ಪರಿಣಾಮ ಇಬ್ಬರು ಬಿದ್ದಿದ್ದಾರೆ.ನಂದ್ ಕುಮಾರ್ ತಲೆಗೆ ತೀವ್ರ ಗಾಯವಾಗಿ, ನಂದೀಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇಬ್ಬರನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ತೀವ್ರವಾಗಿ ಗಾಯಗೊಂಡಿದ್ದ ನಂದ್ ಕುಮಾರ್ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.