Young people, stay away from drugs.
ಕೆಜಿಎಫ್: ಇಂದಿನ ಯುವ ಪೀಳಿಗೆ ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಆರೋಗ್ಯದ ಕಡೆಗೆ ಆದ್ಯತೆ ನೀಡಿ, ದೈಹಿಕ ಫಿಟ್ನೆಸ್ ಕಾಯ್ದುಕೊಳ್ಳಬೇಕಾಗಿದ್ದು, ಸಾಧ್ಯವಾದಷ್ಟು ಜಂಕ್ಫುಡ್ಗಳಿಂದ ಅಂತರ ಕಾಯ್ದುಕೊಂಡು ಮ್ಯಾರಥಾನ್ಗಳಲ್ಲಿ ಭಾಗವಹಿಸುವ ಮೂಲಕ ಇತರರ ಓಟಗಾರರಿಗೆ ಮಾದರಿಯಾಗಬೇಕು ಎಂದು ಎಸ್ಪಿ ಶಿವಾಂಶು ರಜಪೂತ್ ಹೇಳಿದರು.
ನಗರಸಭಾ ಮೈದಾನದಲ್ಲಿ ತಾಲೂಕು ಆಡಳಿತ ಹಾಗೂ ಬೆಸ್ಟ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಲ್ಟ್ರಾ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ಮಾತನಾಡಿ, ಯುವಕರು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಕೆಜಿಎಫ್ ನಗರಕ್ಕೆ ಇದು ಹೆಮ್ಮೆಯ ದಿನ. ಇಂತಹ ದೊಡ್ಡ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಯೋಮಾನದ ಸ್ವರ್ದಿಗಳಿಗೆ ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.
ಅಲ್ಟ್ರಾ ಮ್ಯಾರಥಾನ್ನಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. 3 ಕಿಮೀ, 5 ಕಿಮೀ, ಮತ್ತು 12.5 ಕಿಮೀ ಓಟದಲ್ಲಿ ಜಯಗಳಿಸಿದ ವಿಜೇತರಿಗೆ ಶಾಸಕರು ಬಹುಮಾನ ವಿತರಿಸಿದರು.
ಬೆಸ್ಟ್ ಟ್ರಸ್ಟ್ನ ಪದಾಧಿಕಾರಿಗಳಾದ ಕಮಲನಾಥನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಇತರರು ಇದ್ದರು.