Young woman dies in accident
ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಐಷಾರಾಮಿ ವೋಲ್ವೋ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರಿನ ಕೌಸರ್ ತಾಜ್ (27) ಮೃತೆ.ಇವರು ಹೈದರಾಬಾದ್ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ಣ ಮುಂಭಾಗದಲ್ಲಿ ಕುಳಿತಿದ್ದರು. ಕಂಟೇನರ್ಡಿಕ್ಕಿ ಹೊಡೆದ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂದೆಯೇ ಕುಳಿತಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆಯಬೇಕಾಯಿತು. ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರಿಗೆ ಏನೂ ಆಗಿಲ್ಲ. ಅಪಘಾತದಿಂದ ಕೆಲ ಕಾಲ ರಸ್ತೆಯಲ್ಲಿ ಸಂಚಾರ ಸಿಕ್ಕು ಉಂಟಾಯಿತು. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.