ಬೆಳಗಾವಿ ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷೆ ಹಾಗೂ ಮಾಜಿ ಸಂಸದೆ ಮಂಗಲ ಸುರೇಶ ಅಂಗಡಿ ಧ್ವಜಾರೋಹಣ ನೆರವೇರಿಸಿದರು.ಡಾ.ಆನಂದ ದೇಶಪಾಂಡೆ, ಡಾ.ಕಿರಣ ಪೋತದಾರ, ಡಾ.ಸೂರ್ಯಕುಮಾರ ಕನೈ ಇತರರಿದ್ದರು.
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ವಿದ್ಯಾರ್ಥಿಗಳು ಅಗತ್ಯ ಕೌಶಲ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷೆ ಹಾಗೂ ಮಾಜಿ ಸಂಸದೆ ಮಂಗಲ ಅಂಗಡಿ ಹೇಳಿದರು.
ನಗರದ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ ಈಚೆಗೆ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತ ಶೈಕ್ಷಣಿಕ, ತಾಂತ್ರಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಲೆಗಳಲ್ಲಿ ಶ್ರೇಷ್ಠವಾಗಿದೆ. ಇಲ್ಲಿನ ಯುವಶಕ್ತಿ ಜಗತ್ತಿನಲ್ಲೇ ಪ್ರಸಿದ್ಧಿಯಾಗಿದ್ದು, ಯುವಕರು ದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲ್ಲು ಶ್ರಮಿಸಬೇಕು ಎಂದರು.
ಸಂಸ್ಥೆಯ ನಿರ್ದೇಶಕಿ ಡಾ.ಸ್ಫೂರ್ತಿ ಪಾಟೀಲ, ಕಾಲೇಜಿನ ಆಡಳಿತಾಧಿಕಾರಿ ರಾಜು ಜೋಶಿ, ಅಂಗಡಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ,ಗಣಿತ ವಿಭಾಗದ ಮುಖ್ಯಸ್ಥ ಡಾ.ಕಿರಣ ಪೋತದಾರ, ಎಂಬಿಎ ನಿರ್ದೇಶಕ ಡಾ.ಸೂರ್ಯಕುಮಾರ ಕನೈ, ಡಿಪ್ಲೊಮಾ ಪ್ರಾಚಾರ್ಯ ಪ್ರೊ.ದೀಪಕ ಹುದ್ದಾರ, ಅಂಗಡಿ ಇಂಟರ್‌ನ್ಯಾಷನಲ್ ಸ್ಕೂಲಿನ ಪ್ರಾಚಾರ್ಯೆ ಪ್ರೊ.ಸಂಗೀತಾ ದೇಸಾಯಿ, ಅಂಗಡಿ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಜೀವ ಕುಮಾರಮಠ, ಪ್ರೊ.ಗೌತಮ ದೇಮಟ್ಟಿ, ಪ್ರೊ.ಕಿರಣ ದಳವಾಯಿ, ದೈಹಿಕ ಶಿಕ್ಷಣ ನಿರ್ದೇಶಕ ವಿಶಾಂತ ದಮೋಣೆ, ಮಹಾದೇವ ಶಿರಗಾಂವಕರ ಇತರರಿದ್ದರು.