ವಡಗೇರಾ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡ ಅಂತಾರಾಷ್ಟಿçÃಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಣೆ ವಿರೋಽ ಜಾಗೃತಿ ಕಾರ್ಯಕ್ರಮವನ್ನು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಉದ್ಘಾಟಿಸಿದರು. ಡಿವೈಎಸ್ಪಿ ಸುರೇಶ ನಾಯಕ, ಡಾ.ರಾಜೇಶ್ವರಿ ಗುತ್ತೇದಾರ್, ಅಕ್ಷಯ್, ಶಾಂತಾ ಸಜ್ಜನ್, ಪಿಎಸ್‌ಐ ಮೈಬೂಬ್ ಅಲಿ, ಮಹಾದೇವಪ್ಪ ಶೆಟ್ಟಿಗೇರಾ ಇತರರಿದ್ದರು. 
ರಾಜ್ಯ

ಯುವಕರು ಮಾದಕ ವಸ್ತುಗಳಿಂದ ದೂರವಿರಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ
  • ವಡಗೇರಾದಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ವಡಗೇರಾ; ಮದ್ಯಪಾನ, ಧೂಮಪಾನ ಮತ್ತು ಇನ್ನಿತರ ಮಾದಕ ವಸ್ತುಗಳಿಂದ ಯುವಜನತೆ ದೂರವಿದ್ದು ಆರೋಗ್ಯಕರ ಜೀವನ ರೂಢಿಸಿಕೊಳ್ಳಬೇಕು ಎಂದು ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.
ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಡಗೇರಾ ಪೊಲೀಸ್ ಠಾಣೆಯಿಂದ ಮಂಗಳವಾರ ಹಮ್ಮಿಕೊಂಡ ಅಂತಾರಾಷ್ಟಿçÃಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಣೆ ವಿರೋಽ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮದ್ಯ, ಗಾಂಜಾ, ಅಫೀಮು, ಚರಸ್ ಸೇರಿ ವಿವಿಧ ಮಾದಕ ವಸ್ತುಗಳ ಸೇವನೆಯಿಂದ ನಶೆಗೆ ಒಳಗಾಗಿ ಕೊಲೆ ಸೇರಿ ಹಲವು ಅಹಿತಕರ ಘಟನೆಗಳು ನಡೆಯುತ್ತಿವೆ. ಯುವಕರು ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೆಕು ಎಂದು ಕಿವಿಮಾತು ಹೇಳಿದರು.
ಯಾದಗಿರಿ ಡಿವೈಎಸ್ಪಿ ಸುರೇಶ ನಾಯಕ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಸಮಾಜಕ್ಕೆ ಆತಂಕಕಾರಿ ಬೆಳವಣಿಗೆಯಾಗಿದೆ. ವ್ಯಸನದಿಂದ ಅಪರಾಧ ಪ್ರಕರಣ ಹೆಚ್ಚುತ್ತಿದ್ದು, ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಸಾರ್ವಜನಿಕ ಸ್ಥಳಗಳು ಹಾಗೂ ಶಾಲಾ-ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಸೇವನೆ ಅಥವಾ ಸಾಗಣೆ ನಡೆದರೆ ಕಾನೂನು ಪ್ರಕಾರ ಜೈಲು ಶಿಕ್ಷೆ ಮತ್ತು ದಂಡ ವಿಽಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಶಾಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಽಕಾರಿ ಡಾ.ರಾಜೇಶ್ವರಿ ಗುತ್ತೇದಾರ್, ಪ್ರೊಬೇಷನರಿ ಪಿಎಸ್‌ಐ ಅಕ್ಷಯ್, ಪ್ರಾಚಾರ್ಯೆ ಶಾಂತಾ ಸಜ್ಜನ್, ಪಿಎಸ್‌ಐ ಮೈಬೂಬ್ ಅಲಿ ಇತರರಿದ್ದರು. ಶಿಕ್ಷಕ ಮಹಾದೇವಪ್ಪ ಶೆಟ್ಟಿಗೇರಾ ಕಾರ್ಯಕ್ರಮ ನಿರೂಪಿಸಿದರು. ಪಿಎಸ್‌ಐ ಮೈಬೂಬ್ ಅಲಿ ವಂದಿಸಿದರು.