ಬೆಂಗಳೂರು: ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) 2026ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್‌ನಲ್ಲಿ ಅ.14ರ ಬೆಳಗ್ಗೆ 10.30ರೊಳಗೆ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ವಿಷಯ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎ್ ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗಳಿಗೆ 50 ರೂ. ಪಾವತಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿರುವ, ಅಪೂರ್ಣ/ಆಧಾರ ರಹಿತ, ಶುಲ್ಕ ಪಾವತಿಸದಿರುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಭಾನುವಾರ ನಡೆದಿದ್ದ ಪರೀಕ್ಷೆಯಲ್ಲಿ ಒಟ್ಟು 37 ವಿಷಯಗಳಿಗೆ 1.17 ಲಕ್ಷ ಮಂದಿ ಪರೀಕ್ಷೆ ಬರೆದಿದ್ದಾರೆ.