ಕರ್ನಾಟಕ ಪರೀಕ್ಷಾ ಪ್ರಾಧಿಕಾರ Google
ರಾಜ್ಯ

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಕೀ ಉತ್ತರಗಳ ಪ್ರಕಟ: VAO key answer

ಪತ್ರಿಕೆ- 1 ಮತ್ತು 2ರ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಿರುವ ಆನ್‌ಲೈನ್ ಪೋರ್ಟಲ್ httpL//cetonline.karnataka.gov.in/kea/ ಮೂಲಕ ಅ.8ರ ಬೆಳಗ್ಗೆ 10.3ರೊಳಗೆ ಸಲ್ಲಿಸಬಹುದು

ಬೆಂಗಳೂರು: ಉಳಿಕೆ ಮೂಲ ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅ.4ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ (ಅ.6) ಪ್ರಕಟಿಸಿದೆ.

ಪತ್ರಿಕೆ- 1 ಮತ್ತು 2ರ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಿರುವ ಆನ್‌ಲೈನ್ ಪೋರ್ಟಲ್ http://cetonline.karnataka.gov.in/kea/ ಮೂಲಕ ಅ.8ರ ಬೆಳಗ್ಗೆ 10.3ರೊಳಗೆ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆ ಹೊರಡಿಸಿದ್ದಾರೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಮತ್ತು ಪೂರಕ ದಾಖಲೆಗಳನ್ನು ಪಿಡಿಎ್ ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 25 ರೂ.ಗಳನ್ನು ಪಾವತಿಸಬೇಕು. ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ, ಅಪೂರ್ಣ, ಆಧಾರ ರಹಿತ ಮತ್ತು ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.