ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ file photo
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ: ಆನ್‌ಲೈನ್‌ನಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಅವಕಾಶ: 2nd puc exam private candidate

ಇಲ್ಲಿಯವರೆಗೂ ರಾಜ್ಯದ ಯಾವುದೇ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಭೌತಿಕವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ, ಇದೇ ಮೊದಲ ಬಾರಿಗೆ ಆನ್‌ಲೈನ್ ಮಾದರಿ ಅಳವಡಿಸಿಕೊಂಡಿದ್ದು. ನೋಂದಣಿ ಮಾಡಿಕೊಳ್ಳಲು ನ.11 ಕೊನೆಯ ದಿನವಾಗಿದೆ

  • - ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಥಮ ಪಿಯುಸಿ ಅನುತ್ತೀರ್ಣ, ವ್ಯಾಸಂಗ ಮುಂದುವರಿಸದವರು ಕೂಡ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ.

  • - ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವ ಸಂಯೋಜನೆ ಹೊರತುಪಡಿಸಿ ಇತರೆ ಸಂಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಖಾಸಗಿ ವಿದ್ಯಾರ್ಥಿಗಳ ನಿಯಮಗಳನ್ನು ನಿರಂತರವಾಗಿ ಬದಲಾವಣೆ ಮಾಡುತ್ತಲೇ ಬರುತ್ತಿರುವ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಇಲ್ಲಿಯವರೆಗೂ ರಾಜ್ಯದ ಯಾವುದೇ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಭೌತಿಕವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ, ಇದೇ ಮೊದಲ ಬಾರಿಗೆ ಆನ್‌ಲೈನ್ ಮಾದರಿ ಅಳವಡಿಸಿಕೊಂಡಿದ್ದು. ನೋಂದಣಿ ಮಾಡಿಕೊಳ್ಳಲು ನ.11 ಕೊನೆಯ ದಿನವಾಗಿದೆ ಎಂದು ಮಂಡಳಿ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 2355 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ 1,755 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿ ಮತ್ತು ತಾಂತ್ರಿಕ ಸಹಾಯಕ್ಕಾಗಿ 080 23310075/76 ಅಥವಾ 9448772500 ಸಂಪರ್ಕಿಸಬಹುದು.

ಅರ್ಹತೆಗಳೇನು?

  • - ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು. ಪ್ರಥಮ ಪಿಯುಸಿ ಅನುತ್ತೀರ್ಣ, ವ್ಯಾಸಂಗ ಮುಂದುವರಿಸದವರು ಕೂಡ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ.

  • - ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವ ಸಂಯೋಜನೆ ಹೊರತುಪಡಿಸಿ ಇತರೆ ಸಂಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು.

  • - ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಲ್ಲದವರ ಅರ್ಜಿಯನ್ನು ತಿರಸ್ಕರಿಸಿದ್ದಲ್ಲಿ ಶುಲ್ಕವನ್ನು ಹಿಂದಿರುಗಿಸುವುದಿಲ್ಲ. ಮಾತ್ರವಲ್ಲದೆ, ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲಾಗುವುದು.

  • - ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಭಾಷಾ ಮತ್ತು ಐಚ್ಛಿಕ ವಿಷಯಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ಅವಕಾಶವಿರುತ್ತದೆ. ಆಯ್ಕೆ ಮಾಡಿಕೊಂಡ ನಂತರ, ಯಾವುದೇ ಕಾರಣಕ್ಕೂ ಭಾಷಾ ಮತ್ತು ಐಚ್ಛಿಕ ವಿಷಯಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ.