ಶಿಕ್ಷಕರ ನೇಮಕಾತಿ AI
ರಾಜ್ಯ

ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ನ.16ರವರೆಗೆ ವಿಸ್ತರಣೆ

ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನವಾಗಿತ್ತು. ಈಗ ಮೂರನೇ ಬಾರಿಗೆ ಅರ್ಜಿ ಸ್ಲಲಸಿಕೆ ಅವಧಿಯನ್ನು ವಿಸ್ತರಿಸುತ್ತಿದೆ. ಇಲ್ಲಿಯವರೆಗೂ ಅರ್ಜಿ ಸಲ್ಲಿಸದೇ ಇರುವ ಹುದ್ದೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ಆ.18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು.

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನ.16ರವರೆಗೆ ವಿಸ್ತರಿಸಿದೆ.

ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನವಾಗಿತ್ತು. ಈಗ ಮೂರನೇ ಬಾರಿಗೆ ಅರ್ಜಿ ಸ್ಲಲಸಿಕೆ ಅವಧಿಯನ್ನು ವಿಸ್ತರಿಸುತ್ತಿದೆ. ಇಲ್ಲಿಯವರೆಗೂ ಅರ್ಜಿ ಸಲ್ಲಿಸದೇ ಇರುವ ಹುದ್ದೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ಆ.18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿತ್ತು.

ಒಂದು ವೇಳೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆಗೆ ( 080- 22483145 / 22483140/ 9449588020) ಕರೆಮಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಲಿಂಕ್ schooleducation.karnataka.gov.in/cacell ಭೇಟಿ ನೀಡಬಹುದು.