ಬೆಂಗಳೂರು: ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್ಟಿ) ವಿಜ್ಞಾನ ಹಾಗೂ ಇಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್.ಡಿ. ಸಂಶೋಧನೆ ನಡೆಸುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2026-27ನೇ ಸಾಲಿನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಅಥವಾ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಈಗಾಗಲೇ ಪಿಎಚ್.ಡಿ. ಪದವಿಗೆ ನೋಂದಾಯಿತರಾಗಿರುವ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್:https://forms.gle/tjQ5bSYhHFb2j3PW8
ಹಾಗೂ ಮಾರ್ಗಸೂಚಿ ಲಿಂಕ್: https://l1nk.dev/5bo6ba7
ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಜಾಲತಾಣ http://ksteps.karnataka.gov.in/
ಇ- ಮೇಲ್ ksteps.dst@gmail.com ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.