ನ್ಯೂಸ್

ಪ್ರಭಾಕರ್ ರೆಡ್ಡಿ ವಿರುದ್ಧದ ತನಿಖೆಗೆ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಪ್, ಟ್ವಿಟರ್‌ನಲ್ಲಿ ಸುಳ್ಳು ಸುದ್ದಿ ಹಂಚಿಕೊಂಡ ಆರೋಪ ಎದುರಿಸುತ್ತಿರುವ ವಿ. ಪ್ರಭಾಕರ್ ರೆಡ್ಡಿ ಎಂಬುವರು ಸೇರಿ ಮೂವರು ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಂಗಳೂರು ಪಶ್ಚಿಮ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪ್ರಭಾಕರ್ ರೆಡ್ಡಿ, ಎಚ್.ಎನ್. ವಿಜಯಕಯಮಾರ್, ವಿರುಪಾಕ್ಷ ಬಣಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.