ಕೋಲಾರ: ರಾಜ್ಯದಲ್ಲಿ ಹಿಜಾಬ್, ಹಲಾಲ್ ಬಳಿಕ ಲೌಡ್ಸ್ಪೀಕರ್ ಸಂಬಂಧಿತವಾಗಿ ವಿವಾದ-ವಾಗ್ವಾದಗಳು ಬಹಳಷ್ಟು ನಡೆಯುತ್ತಿರುವ ಸಂದರ್ಭದಲ್ಲೇ ಕೋಮುಸಾಮರಸ್ಯ ಕದಡುವಂಥ ಪ್ರಕರಣವೊಂದು ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಈ ಘಟನೆ ನಡೆದಿದೆ.
ಮುಳಬಾಗಿಲಿನಲ್ಲಿ ನಡೆಯುತ್ತಿದ್ದ ಶ್ರೀರಾಮ ಶೋಭಾಯಾತ್ರೆ ವೇಳೆ ಈ ಘಟನೆ ನಡೆದಿದೆ. ಮುಳಬಾಗಿಲು ಪಟ್ಟಣದಿಂದ ಆವನಿ ಕಡೆಗೆ ಹೊರಟಿದ್ದ ಶೋಭಾಯಾತ್ರೆ ಜಹಾಂಗೀರ್ ಮೊಹಲ್ಲ ಸಮೀಪ ತಲುಪಿದಾಗ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಾಟ ನಡೆಸಿದ್ದಲ್ಲದೆ, ಈ ಸಂದರ್ಭದಲ್ಲಿ ಒಂದು ಬೈಕ್ಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಬಂದೋಬಸ್ತ್ಗಾಗಿ ಸ್ಥಳದಲ್ಲಿ ಹೆಚ್ವಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.