ಚಾಮರಾಜನಗರ: ಎಂದಿನಂತೆ ಸೇವೆ ಒದಗಿಸಬೇಕೆಂದು ಸೂಚನೆ ನೀಡಿದ್ದರೂ ಬಾಗಿಲು ತೆರೆಯದ ರಾಜ್ಯದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರೊನಾ ಹೆಚ್ಚಾಗುತ್ತಿರುವ ಪರಿಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗಳು ಬಾಗಿಲು ಮುಚ್ಚಿರುವುದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಹೆಚ್ಚು ಒತ್ತಡ ಬಿದ್ದಿದೆ. ಕರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಸರ್ಕಾರ ನೀಡಲಿದೆ ಎಂದು ಈ ಮೊದಲೇ ಖಾಸಗಿ ಆಸ್ಪತ್ರೆ ವೈದ್ಯರಿಗೆ ತಿಳಿಸಲಾಗಿತ್ತು. ಹಾಗಿದ್ದೂ ಸೇವೆ ನೀಡದ ವೈದ್ಯರ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದರು.