ನ್ಯೂಸ್

ನಾಳೆಯಿಂದ ಮುಷ್ಕರ ಸಂಚಾರ ವ್ಯತ್ಯಯ

ಎನ್.ವೆಂಕಟೇಶ್

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರಿಂದ ಅರ್ನಿದಿಷ್ಟಾವಧಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಾರಿಗೆ ಸೇವೆಯಲ್ಲಿ ವ್ಯತ್ಯಯದಿಂದ ತೊಂದರೆ ಅನುಭವಿಸುವುದನ್ನು ತಪ್ಪಿಸಲು ಜಿಲ್ಲಾಡಳಿತ ಕಾಯೋರ್ನ್ಮುಖವಾಗಿದೆ.

ಈಗಾಗಲೇ ಪೊಲೀಸ್​ ಇಲಾಖೆ, ಸಾರಿಗೆ ಇಲಾಖೆ ಸೇರಿ ವಿವಿಧ ಇಲಾಖೆಗಳೊಂದಿಗೆ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದ್ದು, ಖಾಸಗಿ ವಾಹನಗಳ ಬಳಕೆಯ ಪರ್ಯಾಯ ವ್ಯವಸ್ಥೆ ನೆಚ್ಚಿಕೊಳ್ಳಲಾಗಿದೆ.

ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಆ.5ರಿಂದ ಅರ್ನಿದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ನೌಕರರಿಗೆ ನಿರೀೆಯ ಸವಲತ್ತು ಒದಗಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕರ್ನಾಟಕ ಸಾರಿಗೆ ನಿಗಮಗಳ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಇದರಿಂದ ನಿಗಮಗಳ ನೌಕರರು ಜಿಲ್ಲಾ ವ್ಯಾಪ್ತಿಯಲ್ಲಿ ಮುಷ್ಕರವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ, ಸಿದ್ಧತೆಯಲ್ಲಿ ತೊಡಗಿದ್ದಾರೆ. ಸ್ಥಳಿಯವಾಗಿಯೂ ಹಲವು ಸಭೆ ನಡೆಸಿ, ಹೋರಾಟ ನಡೆಸುವ ಬಗ್ಗೆ ಈಗಾಗಲೇ ಮೇಲಧಿಕಾರಿಗಳ ಗಮನ ಸೆಳೆಯಲಾಗಿದೆ.

ಪರ್ಯಾಯ ವ್ಯವಸ್ಥೆ

ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಾಯಿಸಲಾಗಿರುವ ಮಜಲು ವಾಹನಗಳು, ಒಪ್ಪಂದದ ವಾಹನಗಳು, ಖಾಸಗಿ ಸೇವಾ ವಾಹನಗಳು ಮತ್ತು ಶಾಲಾ ವಾಹನಗಳು ಸೇರಿ 1059 ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲಾಗುತ್ತಿದೆ. ಇವು ನಿಗಮದ ಬಸ್ಸು ನಿಲ್ದಾಣಗಳಿಂದಲೇ ಸಂಚರಿಸಲಿದ್ದು, ಬೆಂಗಳೂರು, ಕೋಲಾರ, ಚಿಂತಾಮಣಿ, ಬಾಗೇಪಲ್ಲಿ ಹಾಗೂ ಗೌರಿಬಿದನೂರಿನ ಪ್ರಯಾಣ ಸೇವೆ ಒದಗಿಸಲಿವೆ. ಇದರ ನಡುವೆ ಮ್ಯಾಕ್ಸಿಕ್ಯಾಬ್​ ಮತ್ತು ಆಟೋಗಳನ್ನು ಉಪಯೋಗಿಸಿಕೊಳ್ಳುತ್ತಿದ್ದು, ತಾಲೂಕು ಕೇಂದ್ರಗಳಿಂದ ಸ್ಥಳಿಯ ಗ್ರಾಮಗಳಿಗೆ ಹೋಗಿ ಬರಲಿವೆ. ಇದೇ ವೇಳೆ ದುಬಾರಿ ಹಣ ವಸೂಲಿಗೆ ಅವಕಾಶ ನೀಡದಿರಲು ಕ್ರಮ ಕೈಗೊಳ್ಳಲಾಗಿದೆ. ಪರ್ಯಾಯ ವ್ಯವಸ್ಥೆಯ ಎಲ್ಲ ಖಾಸಗಿ ವಾಹನಗಳಲ್ಲಿ ಕೆಎಸ್​ಆರ್​ಟಿಸಿ ವಾಹನಗಳ ದರವನ್ನು ಪಾವತಿಸಿ ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಇದರಿಂದ ಯಾರೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವಂತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ಯಾವುದೇ ಅಹಿತಕರ ಟನೆಗಳಿಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

| ಕುಶಾಲ್​ ಚೌಕ್ಸೆ ಎಸ್ಪಿ, ಚಿಕ್ಕಬಳ್ಳಾಪುರ