ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್ ನಟ, ದಳಪತಿ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಕಾಂಬಿನೇಷ್ನಲ್ಲಿ ಮೂಡಿಬರಲು ಸಜ್ಜಾಗಿರುವ ಬಹುನಿರೀಕ್ಷಿತ 'ಲಿಯೋ' ಚಿತ್ರ ಅಕ್ಟೋಬರ್ 19, 2023 ರಂದು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗಿದೆ. ಈ ಮಧ್ಯೆ ಚಿತ್ರದ ಆಡಿಯೋ ಲಾಂಚ್ಗೆ ಖ್ಯಾತ ನಟರು ಹಾಜರಾಗಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡಿವೆ.
ಈ ವರ್ಷದ ಭಾರೀ ನಿರೀಕ್ಷಿತ ಚಲನಚಿತ್ರಗಳಲ್ಲಿ ದಳಪತಿ ವಿಜಯ್ ಅವರ 'ಲಿಯೋ' ಸಿನಿಮಾ ಕೂಡ ಒಂದಾಗಿದೆ. ಒಂದೆಡೆ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ ಮಲೇಷ್ಯಾದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಆಡಿಯೋ ಲಾಂಚ್ ಚೆನ್ನೈನಲ್ಲಿ ನಡೆಯುತ್ತದೆ ಎಂದು ಬಲವಾಗಿ ನಂಬಲಾಗಿದೆ. ಆದ್ರೆ, ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಘೋಷಿಸುವ ಮುಖೇನ ಊಹಾಪೋಹಗಳಿಗೆ ತೆರೆ ಎಳೆಯಬೇಕಿದೆ.
ಇದನ್ನೂ ಓದಿ: CM Siddaramaiah To Hold 3 Day Visit To Mysuru | 3 ದಿನದ ಮೈಸೂರು ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಸದ್ಯ ವದಂತಿಗಳು ಅಧಿಕೃತವಾದರೆ, ಚಿತ್ರ ತಯಾರಕರು ಅದ್ಧೂರಿ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಕಮಲ್ ಹಾಸನ್, ವಿಕ್ರಮ್, ಧನುಷ್ ಸೇರಿದಂತೆ ಹಲವು ಸ್ಟಾರ್ ನಟರಿಗೆ ವಿಶೇಷ ಆಹ್ವಾನವನ್ನು ನೀಡಲಿದ್ದಾರೆ. ಚಿತ್ರದಲ್ಲಿ ವಿಜಯ್ ಮತ್ತು ತ್ರಿಶಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮಿಸ್ಕಿನ್, ಸಂತಿ ಮಾಯಾದೇವಿ, ಮ್ಯಾಥ್ಯೂ ಥಾಮಸ್, ಮನ್ಸೂರ್ ಅಲಿ ಖಾನ್ ಮುಂತಾದವರ ತಾರಗಣವಿದೆ,(ಏಜೆನ್ಸೀಸ್).