ನ್ಯೂಸ್

ಅಂಡಮಾನ್ ಮತ್ತು ನಿಕೋಬಾರ್​ ದ್ವೀಪದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು| Earthquake

Earthquake: ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು(ನ. 09) ಮಧ್ಯಾಹ್ನ 12.06ಕ್ಕೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಮಧ್ಯಾಹ್ನ 12.06ಕ್ಕೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ  5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು 90 ಕಿ.ಮೀ. ದೂರದಲ್ಲಿ ಎಂದು ತಿಳಿಸಿದೆ.

ಇನ್ನೂ ಘಟನೆಯಿಂದ ಯಾವುದೇ ಆಸ್ತಿಪಾಸ್ತಿ ಮತ್ತು ಸಾವುನೋವಿನ ಬಗ್ಗೆ ವರದಿಯಾಗಿಲ್ಲ. ಏತನ್ಮಧ್ಯೆ ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ (GFZ) ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.07 ಎಂದು ಹೇಳಿದೆ. (ಏಜೆನ್ಸೀಸ್)