ಧಾರವಾಡ: ವಿದ್ಯಾರ್ಥಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಇಲ್ಲಿನ ಹೊಯ್ಸಳನಗರದಲ್ಲಿ ನಡೆದಿದೆ.
ಸುದೀಪ್ ಕೈರಾನ್ ಮೃತ ವಿದ್ಯಾರ್ಥಿ. ಈತ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದವನಾಗಿದ್ದು, ಧಾರವಾಡದ ಕರ್ನಾಟಕ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಓದುತ್ತಿದ್ದ.
ಹೊಯ್ಸಳ ನಗರದಲ್ಲಿ ಬಾಡಿಗೆ ರೂಂನಲ್ಲಿದ್ದ ಸುದೀಪ್, ಕೆಮ್ಮಿನ ಔಷಧಿ ಜತೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದಿದ್ದಾನೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.