ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿಯೊಬ್ಬಳು ಮೈಸೂರಿನ ಕಾಲೇಜೊಂದರ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ಸಾವಿಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಜಿಷ್ಣ ಎಂದು ಗುರುತಿಸಲಾಗಿದೆ. ಈಕೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ನಿವಾಸಿ. ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದಳು.
ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)