ನ್ಯೂಸ್

ಕೂಲ್‌ಡ್ರಿಂಕ್ಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ| raped

ಕೋಲ್ಕತ್ತಾ: ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಇಂಡಿಯನ್ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್‌ (IIM) ಕಾಲೇಜಿನ ಹುಡುಗರ ಹಾಸ್ಟೆಲ್‌ನಲ್ಲಿ ನಡೆದಿದೆ.

ನಿನ್ನೆ (11) ಮಹಿಳೆಯನ್ನು ಕೌನ್ಸೆಲಿಂಗ್ ಸೆಷನ್ ನೆಪದಲ್ಲಿ ಹಾಸ್ಟೆಲ್‌ಗೆ ಕರೆಸಲಾಗಿತ್ತು. ಅಲ್ಲಿ ಆರೋಪಿ ಮಹಾವೀರ್ ಟೊಪ್ಪನ್ನವರ್ ಅಲಿಯಾಸ್ ಪರಮಾನಂದ ಜೈನ್ ನೀಡಿದ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ಸೇವಿಸಿದ ನಂತರ ತಾನು ಪ್ರಜ್ಞೆ ಕಳೆದುಕೊಂಡೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಪ್ರಜ್ಞೆ ಬಂದ ನಂತರ, ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆ ಹೇಳಿದ್ದಾಳೆ.

ಕೋಲ್ಕತ್ತಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ವಿದ್ಯಾರ್ಥಿನಿಯೊಬ್ಬಳು ಬಾಲಕರ ಹಾಸ್ಟೆಲ್‌ನಲ್ಲಿ ಕಾಲೇಜು ಸಹಪಾಠಿಯಿಂದ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಆರೋಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ಎಫ್‌ಐಆರ್ ದಾಖಲಿಸಿದ ಬಳಿಕ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

(ಏಜೆನ್ಸೀಸ್)

ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.ಕೋಲ್ಕತ್ತಾ ನ್ಯಾಯಾಲಯವು ಆರೋಪಿಯ ಜಾಮೀನು ತಿರಸ್ಕರಿಸಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.