ಕೊಳ್ಳೇಗಾಲದ ನಿಸರ್ಗ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಸನ್ಮಾನಿಸಿ, ಅಭಿನಂದಿಸಿತು. ಡಾ.ಎಸ್.ದತ್ತೇಶ್‌ಕುಮಾರ್, ಎಸ್.ನಾಗರಾಜು, ರೂಪಾ ದತ್ತೇಶ್, ಜಿ.ಚಂದ್ರಶೇಖರ್, ಡಿ.ಕೃಷ್ಣಗೌಡ, ಡಾ.ಧನಂಜಯ ಇತರರು ಇದ್ದರು. 
ನ್ಯೂಸ್

ವಿದ್ಯಾರ್ಥಿಗಳು ಒಳ್ಳೆಯ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಿ

ಎಂ.ರವಿ

ಕೊಳ್ಳೇಗಾಲ: ಪಟ್ಟಣದ ನಿಸರ್ಗ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ.

ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮೂರು ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳು ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ವಿಷಯವಾರು ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರ ವಿಸಿದ ಬಳಿಕ ಕಾಲೇಜಿನ ಸಂಯೋಜನಾಧಿಕಾರಿ ಎಂ.ಚೆನ್ನಶೆಟ್ಟಿ ಮಾತನಾಡಿ, ಕಷ್ಟಪಟ್ಟು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು ಮಾನಸ ಶಿಕ್ಷಣ ಸಂಸ್ಥೆಯ ಆದ್ಯ ಕರ್ತವ್ಯ. ಎಲ್ಲ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್ ಮಾತನಾಡಿ, ಸಾಂಕೇತಿಕವಾಗಿ ಪಾಲಕರೊಂದಿಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಅಭಿನಂದಿಸಲಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೇ ಹೆಸರಾಗಿರುವ ಮಾನಸೋತ್ಸವ ವಿಜೃಂಭ ಣೆಯ ಕಾರ್ಯಕ್ರಮದಲ್ಲಿ ಎಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಲಾ, ವಾಣಿಜ್ಯ, ವಿಜ್ಞಾನ 3 ವಿಭಾಗಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಟಾಪರ್ ಆಗಿರುವುದು ಹೆಮ್ಮೆಯ ವಿಚಾರವಾಗಿದೆ. ಮುಂದೆ ಬರುವ ಸಿಇಟಿ, ಜೆಇಇ, ನೀಟ್ ಪರೀಕ್ಷೆ ಗಳಲ್ಲೂ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ‌್ಯಾಂಕ್ ಪಡೆದು ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಸಲಹೆ ನೀಡಿದರು.

ಮಾನಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ನಾಗರಾಜು, ಉಪಾಧ್ಯಕ್ಷ ರೂಪಾ ದತ್ತೇಶ್, ಸಂಯೋಜನಾಧಿಕಾರಿ ಜಿ.ಚಂದ್ರಶೇಖರ್, ಪ್ರಾಂಶುಪಾಲ ಡಿ.ಕೃಷ್ಣಗೌಡ, ಡಾ.ಧನಂಜಯ, ಡಾ.ಜಗದೀಶ, ಆರ್.ಶಂಕರ್, ಗಿರಿಜಾ ಲಕ್ಷ್ಮೀ, ಅಕ್ಷರ ಅಕಾಡೆಮಿ ಅಧ್ಯಕ್ಷ ರಾಜಕುಮಾರ್, ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿಗಳು, ಪಾಲಕರು ಇದ್ದರು.